ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ 7 ವರ್ಷಗಳಲ್ಲಿ 157 ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ: ಕೇಂದ್ರ

ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ
Last Updated 24 ಅಕ್ಟೋಬರ್ 2021, 8:43 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು 2014ರಿಂದೀಚೆಗೆ 157 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಿದ್ದು, ಈ ಯೋಜನೆಗಳಿಗೆ ₹17,691 ಕೋಟಿ ವೆಚ್ಚ ಮಾಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಕಾಲೇಜುಗಳು ಆರಂಭಗೊಂಡಾಗ ಹೊಸದಾಗಿ 16 ಸಾವಿರ ವೈದ್ಯಕೀಯ ಸೀಟುಗಳು ಸೇರ್ಪಡೆಗೊಳ್ಳಲಿವೆ ಎಂದು ಅದು ಹೇಳಿದೆ.

‘ಈಗಾಗಲೇ 64 ಕಾಲೇಜುಗಳು ಆರಂಭವಾಗಿದ್ದು, ಇದರಿಂದ 6,500 ವೈದ್ಯಕೀಯ ಸೀಟುಗಳು ಲಭ್ಯವಾಗಿವೆ. ಕೇಂದ್ರೀಯ ಪ್ರಾಯೋಜಿತ ಯೋಜನೆಗಳ (ಸಿಎಸ್‌ಎಸ್) ಅಡಿಯಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈದ್ಯಕೀಯ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಿ ಎಂಬಿಬಿಎಸ್‌ ಸೀಟುಗಳನ್ನು ಹೆಚ್ಚಿಸುವ ಸಲುವಾಗಿ ₹2,451 ಕೋಟಿ ಒದಗಿಸಲಾಗಿದೆ’ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

‘ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳನ್ನೇ ನೋಡಿಕೊಂಡು ಈ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಹಿಂದುಳಿದ ಜಿಲ್ಲೆಗಳಿಗೆ ಆದ್ಯತೆ ನೀಡಲಾಗಿದೆ. ಈಶಾನ್ಯ ರಾಜ್ಯಗಳು ಮತ್ತು ವಿಶೇಷ ಆಧ್ಯತೆಯ ರಾಜ್ಯಗಳಲ್ಲಿ ಇಂತಹ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕೇಂದ್ರವು ಶೇ 90ರಷ್ಟು ಮತ್ತು ರಾಜ್ಯ ಶೇ 10ರಷ್ಟು ಹಣಕಾಸು ಒದಗಿಸುತ್ತದೆ, ಇತರ ರಾಜ್ಯಗಳಲ್ಲಿ 60:40 ಅನುಪಾತದಲ್ಲಿ ಹಣಕಾಸು ಒದಗಿಸಲಾಗುತ್ತಿದೆ’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT