ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹೆಚ್ಚಳ: ಗೋವಾದಲ್ಲಿ ಜೂನ್‌ 7ರವರೆಗೆ ಲಾಕ್‌ಡೌನ್ ವಿಸ್ತರಣೆ

Last Updated 29 ಮೇ 2021, 10:49 IST
ಅಕ್ಷರ ಗಾತ್ರ

ಪಣಜಿ: ಗೋವಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಜೂನ್‌ 7ರವರೆಗೆ ಲಾಕ್‌ಡೌನ್‌ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರ ಕಚೇರಿ ಮೂಲಗಳು ತಿಳಿಸಿವೆ.

‘ಜೂನ್‌ 7ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಆದಕ್ಕೆ ಸಂಬಂಧಿಸಿದ ಆದೇಶಗಳನ್ನು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಬೇಕು’ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮಾಡಿದೆ.

ಗೋವಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 3ರಿಂದ ಮೇ 23 ರವರೆಗೆ ಲಾಕ್‌ಡೌನ್‌ ಘೋಷಿಸಲಾಗಿತ್ತು. ಬಳಿಕ ಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು.

ಅಗತ್ಯ ವಸ್ತುಗಳು ಖರೀದಿ ಹಾಗೂ ಮದ್ಯ ಮಾರಾಟಕ್ಕೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಅನುಮತಿ ನೀಡಲಾಗಿದೆ.

ಗೋವಾದಲ್ಲಿ ಇದುವರೆಗೆ 1.53 ಲಕ್ಷ ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಆ ಪೈಕಿ 2,570 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಸದ್ಯ ಗೋವಾದಲ್ಲಿ 15,326 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT