ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದ ಪರಿಸ್ಥಿತಿ ಬಗ್ಗೆ ವಿವಿಧ ಪಕ್ಷಗಳ ನಾಯಕರಿಗೆ ಕೇಂದ್ರದಿಂದ ಮಾಹಿತಿ

Last Updated 26 ಆಗಸ್ಟ್ 2021, 8:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಗುರುವಾರ ಮಾಹಿತಿ ನೀಡಿದೆ.

ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಸಂಸತ್‌ ಭವನದಲ್ಲಿ ರಾಜಕೀಯ ನಾಯಕರಿಗೆ ಮಾಹಿತಿ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಪಿಯೂಷ್‌ ಗೋಯಲ್‌, ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು.

ಅಫ್ಗಾನಿಸ್ತಾನದಿಂದ ಭಾರತೀಯರ ಸ್ಥಳಾಂತರ ವಿಷಯದ ಜತೆಗೆ ಅಲ್ಲಿನ ಪರಿಸ್ಥಿತಿಯ ಸಂಪೂರ್ಣ ಮಾಹಿತಿಯನ್ನು ಸಭೆಯಲ್ಲಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಎನ್‌ಸಿಪಿ ನಾಯಕ ಶರದ್‌ ಪವಾರ್‌, ರಾಜ್ಯಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ, ಡಿಎಂಕೆ ನಾಯಕ ಟಿ.ಆರ್‌. ಬಾಲು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಅಪ್ನಾ ದಳದ ಅನುಪ್ರಿಯಾ ಪಟೇಲ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇವನ್ನೂ ಓದಿ
*

*
*
*
*
*
*
​*
*
*
*
*
*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT