ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ 'ಮನದ ಮಾತನ್ನು' ಸರ್ಕಾರ ಕೇಳಿಸಿಕೊಳ್ಳಬೇಕು: ರಾಹುಲ್ ಗಾಂಧಿ

Last Updated 23 ಆಗಸ್ಟ್ 2020, 10:54 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ–ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಕುರಿತು ವಿದ್ಯಾರ್ಥಿಗಳ ಕಳವಳವನ್ನು ಪರಿಗಣಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರವೇಶ ಪರೀಕ್ಷೆಯನ್ನು ಮುಂದೂಡಬೇಕೆಂದು ಹಲವಾರು ವಿದ್ಯಾರ್ಥಿಗಳು ಮತ್ತು ಪೋಷಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ರಾಹುಲ್ ಗಾಂಧಿ ಪೋಷಕರ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಎನ್ಇಇಟಿ, ಜೆಇಇ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳ ಮನದ ಮಾತನ್ನು ಕೇಂದ್ರ ಸರ್ಕಾರ ಕೇಳಬೇಕು ಮತ್ತು ಈ ಕುರಿತಾಗಿ ಒಪ್ಪಬಹುದಾದಂತ ಪರಿಹಾರಕ್ಕೆ ಬರಲಿ' ಎಂದು ಒತ್ತಾಯಿಸಿದ್ದಾರೆ.

ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 17) ವಜಾಗೊಳಿಸಿ, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರಮಟ್ಟದಲ್ಲಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಳು (ನೀಟ್‌) ನಿಗದಿಯಂತೆ ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಲಿವೆ ಎಂದು ತಿಳಿಸಿದೆ. ಇದೇ ವೇಳೆ ವಿದ್ಯಾರ್ಥಿಗಳ ಅತ್ಯಮೂಲ್ಯ ವರ್ಷವನ್ನು 'ವ್ಯರ್ಥ ಮಾಡಲಾಗುವುದಿಲ್ಲ' ಮತ್ತು ಬದುಕು ಮುಂದುವರಿಯಬೇಕಾಗಿದೆ' ಎಂದು ಹೇಳಿತ್ತು.

ಕಾಂಗ್ರೆಸ್ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕೋವಿಡ್-19 ಪರಿಸ್ಥಿತಿ ಸ್ಥಿರವಾಗುವವರೆಗೆ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು. ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡದಲ್ಲಿದ್ದಾರೆ, ದೈಹಿಕವಾಗಿ ಪರೀಕ್ಷೆಗಳಿಗೆ ಹಾಜರಾಗುವಾಗ ಅವರು ಹೇಗೆ ರೋಗನಿರೋಧಕರಾಗಿ ಉಳಿಯಬಹುದು ಎಂಬ ಬಗ್ಗೆ ಪತ್ರದಲ್ಲಿ ವಿವರಿಸಿದ್ದಾರೆ.

ಜಂಟಿ ಪ್ರವೇಶ ಪರೀಕ್ಷೆಯು ಸೆಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, ಜೆಇಇ (ಅಡ್ವಾನ್ಸ್ಡ್) ಸೆಪ್ಟೆಂಬರ್ 27 ರಂದು ನಡೆಯಲಿದೆ. ನೀಟ್ ಸೆಪ್ಟೆಂಬರ್ 13 ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT