ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸರ್ಕಾರದ ವಿರುದ್ಧ ರಾಜ್ಯಪಾಲರ ವಾಗ್ದಾಳಿ

Last Updated 4 ಫೆಬ್ರುವರಿ 2021, 7:52 IST
ಅಕ್ಷರ ಗಾತ್ರ

ಮುಂಬೈ: ದೂರದ ಓಟಗಾರ್ತಿ, ಏಷ್ಯನ್ ಗೇಮ್ಸ್ ಪದಕ ‍ಪುರಸ್ಕೃತೆ ಕವಿತಾ ರೌತ್ ಅವರಿಗೆ ಉದ್ಯೋಗ ನೀಡದಿರುವ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಟೀಕಿಸಿದ್ದಾರೆ. ಈ ವಿಷಯದಲ್ಲಿ ಏನೋ ತಪ್ಪಾಗಿದೆ ಎಂದು ಅವರು ಹೇಳಿದ್ದಾರೆ.

ನಾಸಿಕ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ ಕವಿತಾ ರೌತ್‌ಗೆ ಡೆಹ್ರಾಡೂನ್‌ನತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಉದ್ಯೋಗ ನೀಡಲಾಗಿದೆ. ಆದರೆ ಅವರು ತಮ್ಮ ಗ್ರಾಮದಲ್ಲಿ ಕೆಲಸ ಮಾಡಲು ಇಚ್ಛಿಸುತ್ತಿದ್ದಾರೆ. ನಾನು ಈ ಸಂಬಂಧ ರಾಜ್ಯದ ಕ್ರೀಡಾ ಸಚಿವರಿಗೆ ಪತ್ರ ಬರೆದಿದ್ದೆ. ಆಗ ಸಚಿವರು ಕವಿತಾ ಅವರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು’ ಎಂದು ಅವರು ತಿಳಿಸಿದರು.

‘ಕ್ರೀಡಾ ಸಚಿವರು ಮತ್ತು ನಾನು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೂ ಮಹಾರಾಷ್ಟ್ರ ಸರ್ಕಾರ ಈವರೆಗೆ ಅವರಿಗೆ ಉದ್ಯೋಗ ನೀಡಿಲ್ಲ. ಇದರಲ್ಲಿ ಏನೋ ತಪ್ಪು ನಡೆದಿದೆ’ ಎಂದು ಅವರು ಹೇಳಿದರು.

‘ಸರ್ಕಾರ ನಿಮಗೆ ಉದ್ಯೋಗವನ್ನು ನೀಡುತ್ತದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದು ನಾನು ಕವಿತಾ ಅವರಿಗೆ ಭರವಸೆ ನೀಡಿದ್ದೇನೆ. ಸರ್ಕಾರ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸದಿದ್ದರೆ, ಅವರು ಹೇಗೆ ಕೆಲಸ ಮಾಡಲು ಸಾಧ್ಯ’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT