ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರು ಚುನಾಯಿತ ಸರ್ಕಾರಗಳಿಗೆ ತೊಂದರೆ ಕೊಡುತ್ತಿದ್ದಾರೆ: ಕೇಜ್ರಿವಾಲ್

ರಾಜ್ಯಪಾಲರ ನಡೆ ಸಂವಿಧಾನಕ್ಕೆ ಕಪ್ಪುಚುಕ್ಕೆ ಎಂದ ಕೇಜ್ರಿವಾಲ್‌
Last Updated 25 ಜನವರಿ 2023, 12:27 IST
ಅಕ್ಷರ ಗಾತ್ರ

‌‌ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಕೇಂದ್ರ ಸರ್ಕಾರದಿಂದ ನೇಮಕ ಮಾಡಲ್ಪಟ್ಟ ರಾಜ್ಯಪಾಲರು ಹಾಗೂ ಲೆಫ್ಟಿನೆಂಟ್‌ ಗವರ್ನರ್‌ಗಳು ಚುನಾಯಿತ ಸರ್ಕಾರದ ಕೆಲಸಗಳಿಗೆ ತಡೆಯೊಡ್ಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಅವರ ನಡೆಗಳು ಸಂವಿಧಾನಕ್ಕೆ ಕಪ್ಪು ಚುಕ್ಕೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ದೆಹಲಿ ಸರ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಲಾತ್‌ ಸಾಹಿಬ್‌ಗಳಿಂದ (ರಾಜ್ಯಪಾಲರು ಹಾಗೂ ಲೆಫ್ಟಿನೆಂಟ್‌ ಗವರ್ನರ್‌) ಹೇಗೆ ರಾಜ್ಯವನ್ನು ರಕ್ಷಣೆ ಮಾಡಬೇಕು ಎನ್ನುವುದನ್ನು ನಾವು ಯೋಚಿಸಬೇಕಿದೆ‘ ಎಂದು ಹೇಳಿದ್ದಾರೆ.

‘ಕೇಂದ್ರ ಸರ್ಕಾರವು ನ್ಯಾಯಾಂಗದೊಂದಿಗೆ, ರಾಜ್ಯ ಸರ್ಕಾರಗಳೊಂದಿಗೆ, ರೈತರೊಂದಿಗೆ, ಉದ್ದಿಮೆದಾರರೊಂದಿಗೆ ಸಂಘರ್ಷದಲ್ಲಿ ಇದ್ದು, ಇವೆಲ್ಲಾ ಅಂತ್ಯವಾದರೆ ಭಾರತ ನಂಬರ್‌ 1 ರಾಷ್ಟ್ರವಾಗಲಿದೆ‘ ಎಂದು ಅವರು ಹೇಳಿದರು.

ಆಹಾರ ಉತ್ಪನ್ನಗಳ ಮೇಲೆ ಇರುವ ಜಿಎಸ್‌ಟಿ ರದ್ದು ಮಾಡಿ, ಜಿಎಸ್‌ಟಿಯನ್ನು ಸರಳಗೊಳಿಸಿ ಎಂದು ಇದೇ ವೇಳೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT