ನವದೆಹಲಿ: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳು ₹ 2 ಲಕ್ಷಕ್ಕಿಂತ ಹೆಚ್ಚು ಹಣವನ್ನು ನಗದು ರೂಪದಲ್ಲಿ ಸ್ವೀಕರಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಆದಾಯ ತೆರಿಗೆ ಇಲಾಖೆಗಾಗಿ ನೀತಿ ರೂಪಿಸುವ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಶುಕ್ರವಾರ ಈ ಅಧಿಸೂಚನೆ ಹೊರಡಿಸಿದೆ.

ಕೋವಿಡ್–19 ರೋಗಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ST ಅನ್ವಯ ಒಂದು ದಿನದಲ್ಲಿ ಒಬ್ಬ ವ್ಯಕ್ತಿಯು ₹ 2 ಲಕ್ಷಕ್ಕಿಂತ ಹೆಚ್ಚು ನಗದು ಪಡೆಯುವುದನ್ನು ನಿರ್ಬಂಧಿಸುತ್ತದೆ. ಕಪ್ಪು ಹಣ ತಡೆಯುವ ಸಂಬಂಧ 2017ರಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರೂಪಿಸಿತ್ತು.

‘ಈ ಕಾಯ್ದೆಯಲ್ಲಿ ಹೊಸದಾಗಿ ನೀಡಲಾಗಿರುವ ಈ ಸೌಲಭ್ಯವು ಏಪ್ರಿಲ್ 1 ರಿಂದ ಮೇ 31ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರೋಗಿಯ ಪಾನ್ ಅಥವಾ ಆಧರ್ ಸಂಖ್ಯೆ, ಹಣ ಪಾವತಿಸುವವರು ಮತ್ತು ರೋಗಿಯ ನಡುವಿನ ಸಂಬಂಧನ್ನು ಪಡೆದುಕೊಳ್ಳಬೇಕು ಎಂಬ ನಿಬಂಧನೆಗಳನ್ನು ಸೇರಿಸಲಾಗುತ್ತಿದೆ‘ ಎಂದು ಹೊಸ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.