ಭಾನುವಾರ, ಮೇ 9, 2021
26 °C

ಆಹಾರ ಸಂಸ್ಕರಣಾ ವಲಯ: ₹10,900 ಕೋಟಿ ಪಿಎಲ್‌ಐಗೆ ಅನುಮೋದನೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ಆಹಾರ ಸಂಸ್ಕರಣಾ ಉದ್ಯಮ ವಲಯಕ್ಕೆ ಸಂಬಂಧಿಸಿ ₹ 10,900 ಕೋಟಿ ಮೊತ್ತದ ‘ಉತ್ಪಾದನಾ ಆಧಾರಿತ ಉತ್ತೇಜನಾ ಯೋಜನೆ’ಗೆ (ಪಿಎಲ್‌ಐ) ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಈ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯಿಂದ 2.5 ಲಕ್ಷ ಉದ್ಯೋಗಗಳ ಸೃಷ್ಟಿಯಾಗಲಿದ್ದು, ರಫ್ತು ಉದ್ಯಮದ ಬೆಳವಣಿಗೆಗೆ ನೆರವಾಗಲಿದೆ. ದೇಶದ ಗ್ರಾಹಕರಿಗೆ ಮೌಲ್ಯವರ್ಧಿತ ಉತ್ಪನ್ನಗಳು ಸಹ ಸಿಗಲಿವೆ ಎಂದು ಆಹಾರ ಸಚಿವ ಪೀಯೂಷ್‌ ಗೋಯಲ್‌ ಹೇಳಿದರು.

ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪಿಎಲ್‌ಐಗೆ ಅನುಮೋದನೆ ನೀಡುವ ಮೂಲಕ ದೇಶದ ರೈತ ಸಮುದಾಯಕ್ಕೆ ಗೌರವ ಸಲ್ಲಿಸಿದಂತಾಗಿದೆ’ ಎಂದರು.

‘ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ 12–13 ವಲಯಗಳಿಗೆ ಪಿಎಲ್‌ಐ ನೀಡುವುದಾಗಿ ಘೋಷಿಸಲಾಗಿತ್ತು. ಈ ಪೈಕಿ 6 ವಲಯಗಳಿಗೆ ಪಿಎಲ್‌ಐ ಘೋಷಿಸಲಾಗಿದೆ. ಈಗ ಆಹಾರ ಸಂಸ್ಕರಣಾ ವಲಯಕ್ಕೆ ಸಂಬಂಧಿಸಿದ ಪಿಎಲ್‌ಐಗೆ ಅನುಮೋದನೆ ನೀಡಲಾಗಿದೆ’ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ರವಿಶಂಕರ ಪ್ರಸಾದ್‌ ಹೇಳಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು