ಗುರುವಾರ , ಆಗಸ್ಟ್ 18, 2022
26 °C

ಉದಯಪುರ ಹತ್ಯೆ ಬೆಂಬಲಿಸುವ ವಿಷಯವನ್ನು ಸಾಮಾಜಿಕ ಮಾಧ್ಯಮಗಳು ತೆಗೆಯಬೇಕು: ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉದಯಪುರದಲ್ಲಿ ನಡೆದ ಹತ್ಯೆಯನ್ನು ಪ್ರೋತ್ಸಾಹಿಸುವ, ವೈಭವೀಕರಿಸುವ ಅಥವಾ ಸಮರ್ಥಿಸುವ ವಿಷಯಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳು ತೆಗೆದುಹಾಕುವ ಅಗತ್ಯವಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ಸಚಿವಾಲಯ ಶುಕ್ರವಾರ ಹೇಳಿದೆ.

ರಾಜಸ್ಥಾನದ ಉದಯಪುರದ ನಿವಾಸಿ ಕನ್ಹಯ್ಯಾ ಲಾಲ್ ಅವರನ್ನು ಮಂಗಳವಾರ ರಿಯಾಜ್ ಅಖ್ತಾರಿ ಮತ್ತು ಘೌಸ್ ಮೊಹಮ್ಮದ್ ಎಂಬುವವರು ಕತ್ತು ಸೀಳಿ ಕೊಂದಿದ್ದರು. ಅಲ್ಲದೆ, ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

‘ಉದಯಪುರದ ಹತ್ಯೆಯನ್ನು ಪ್ರೋತ್ಸಾಹಿಸುವ, ವೈಭವೀಕರಿಸುವ, ಸಮರ್ಥಿಸುವ ಯಾವುದೇ ವಿಷಯವನ್ನು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ತೆಗೆದು ಹಾಕಬೇಕು’ ಎಂದು ಜೂನ್ 29ರಂದು ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಉದಯಪುರದ ಹತ್ಯೆಯ ವಿಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಕೆಲ ಮಂದಿ ಕೊಲೆಯನ್ನು ವೈಭವೀಕರಿಸುವ ಮತ್ತು ಸಮರ್ಥಿಸುವ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು ವರದಿಯಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು