ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ನಿಷೇಧ

Last Updated 18 ಏಪ್ರಿಲ್ 2021, 16:27 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ನಿಂದ ಬಳಲುವವರ ಚಿಕಿತ್ಸೆಗೆ ಒದಗಿಸುವ ಉದ್ದೇಶದಿಂದ, 9 ಉದ್ದಿಮೆಗಳನ್ನು ಹೊರತುಪಡಿಸಿ ಉಳಿದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶಿಸಿದೆ.

ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ ಅವರು ಈ ಸಂಬಂಧಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಈ ಅದೇಶವು ಏ. 22ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಕೈಗಾರಿಕೆಗಳಿಗೆ ನೀಡಲಾಗುತ್ತಿದ್ದ ಆಮ್ಲಜನಕವನ್ನು ಆಸ್ಪತ್ರೆಗಳಿಗೆ ಪೂರೈಸುವಂತೆ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತಾಧಿಕಾರ ಸಮಿತಿ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT