'ಅಲಿ ಎಕ್ಸ್‌ಪ್ರೆಸ್' ಸೇರಿ 43 ಮೊಬೈಲ್ ಅಪ್ಲಿಕೇಷನ್‌ಗಳಿಗೆ ನಿರ್ಬಂಧ

ನವದೆಹಲಿ: ರಾಷ್ಟ್ರದ ಸಾರ್ವಭೌಮತ್ವ, ಸಮಗ್ರತೆ ಮತ್ತು ಭದ್ರತೆಯ ವಿಚಾರದಲ್ಲಿ ಪೂರ್ವಗ್ರಹಗಳನ್ನು ಹೊಂದಿರುವ ಕಾರಣಕ್ಕೆ 'ಅಲಿಬಾಬಾ ವರ್ಕ್‌ಬೆಂಚ್', 'ಅಲಿ ಎಕ್ಸ್‌ಪ್ರೆಸ್', 'ಅಲಿಪೇ ಕ್ಯಾಷಿಯರ್', 'ಕ್ಯಾಮ್‌ಕಾರ್ಡ್' ಮತ್ತು 'ವೀಡೇಟ್' ಸೇರಿದಂತೆ 43 ಮೊಬೈಲ್ ಅಪ್ಲಿಕೇಷನ್‌ಗಳನ್ನು ಸರ್ಕಾರ ಮಂಗಳವಾರ ನಿರ್ಬಂಧಿಸಿದೆ.
ಗೃಹ ವ್ಯವಹಾರಗಳ ಸಚಿವಾಲಯದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಸಮಗ್ರ ವರದಿಗಳ ಆಧಾರದ ಮೇಲೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು 43 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲು ಮಂಗಳವಾರ ಆದೇಶ ಹೊರಡಿಸಿದೆ. ಈ ಅಪ್ಲಿಕೇಷನ್‌ಗಳು ಚೀನಾದ ಸಂಪರ್ಕ ಹೊಂದಿವೆ ಎಂದು ಮೂಲಗಳು ತಿಳಿಸಿವೆ.
ಈ ಮೊದಲು ಜೂನ್ 29 ರಂದು ಸರ್ಕಾರವು 59 ಮೊಬೈಲ್ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಿತ್ತು ಮತ್ತು 2020ರ ಸೆಪ್ಟೆಂಬರ್ 2 ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ 118 ಆ್ಯಪ್‌ಗಳನ್ನು ನಿಷೇಧಿಸಲಾಗಿತ್ತು.
'ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತ ಸರ್ಕಾರ ಇಂದು 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಈ ಅಪ್ಲಿಕೇಷನ್‌ಗಳು ಭಾರತದ ಸಾರ್ವಭೌಮತ್ವ, ಸಮಗ್ರತೆ, ಭದ್ರತೆ ಮತ್ತು ಸಾರ್ವಜನಿಕ ರಕ್ಷಣೆ ವಿಚಾರದಲ್ಲಿ ಪೂರ್ವಗ್ರಹ ಪೀಡಿತ ಚಟುವಟಿಕೆಗಳಲ್ಲಿ ತೊಡಗಿಕೊಂಡಿವೆ ಎಂಬ ವರದಿಯ ಆಧಾರದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ' ಎಂದು ಐಟಿ ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.