ಮುಂಗಾರು ಅಧಿವೇಶನ– ಭಾನುವಾರ ಸರ್ವಪಕ್ಷ ಸಭೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ (ಜುಲೈ 19) ಆರಂಭವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸರ್ಕಾರವು ಭಾನುವಾರ ಸರ್ವಪಕ್ಷ ಸಭೆ ಕರೆದಿದೆ.
ಈ ಸಭೆಗೆ ಎಲ್ಲಾ ವಿರೋಧ ಪಕ್ಷಗಳ ನಾಯಕರಿಗೆ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಷಿ ಅವರು ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೂ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 13ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.