ಬುಧವಾರ, ಜನವರಿ 27, 2021
22 °C
ಕೇಂದ್ರ ಆರೋಗ್ಯ ಸಚಿವಾಲಯದ ನಿರ್ಧಾರ, ರಾಜ್ಯ ಸರ್ಕಾರಗಳಿಗೆ ಪತ್ರ

ಜ.17ರ ‘ಪಲ್ಸ್ ಪೋಲಿಯೊ ಕಾರ್ಯಕ್ರಮ‘ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ ಜನವರಿ 17ರಂದು ದೇಶದಾದ್ಯಂತ ನಡೆಯಬೇಕಿದ್ದ ‘ಪಲ್ಸ್ ಪೋಲಿಯೊ ಲಸಿಕೆ’ ಕಾರ್ಯಕ್ರಮವನ್ನು ಮುಂದಿನ ಸೂಚನೆಯವರೆಗೂ ಮುಂದೂಡಲು ನಿರ್ಧರಿಸಿರುವುದಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸಂಬಂಧ ಜನವರಿ 9ರಂದು ಎಲ್ಲ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಪತ್ರದಲ್ಲಿ ಮುಂದಿನ ಸೂಚನೆ ಬರುವವರೆಗೂ, ಜ.17 ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದೂಡುವಂತೆ ಸೂಚಿಸಿದೆ.

ಪ್ರತಿ ವರ್ಷ ಜ.17ರಂದು ದೇಶದಾದ್ಯಂತ ರಾಷ್ಟ್ರೀಯ ರೋಗನಿರೋಧಕ ದಿನ(ಎನ್‌ಐಡಿ) ಅಥವಾ ಪಲ್ಸ್ ಪೋಲಿಯೊ ರೋಗನಿರೋಧಕ ಕಾರ್ಯಕ್ರಮದ ಅಂಗವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.

ಆದರೆ,  ಈ ವರ್ಷ ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳು ನಡೆದಿರುವ ಹಿನ್ನೆಲೆಯಲ್ಲಿ ಮುಂದಿನ ಸೂಚನೆವರೆಗೂ ಈ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ಆರೋಗ್ಯ ಸಚಿವ ಹರ್ಷವರ್ಧನ್ ಅವರು ‘ಜನವರಿ 17ರಿಂದ ಮೂರು ದಿನಗಳ ಕಾಲ ದೇಶದಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯಲಿದೆ‘ ಎಂದು ಜ.8ರಂದು ತಿಳಿಸಿದ್ದರು. ಈಗ ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ, ಆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು