ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಉಲ್ಬಣ: ನವೆಂಬರ್ 30ರವರೆಗೆ ದೇಶದಲ್ಲಿ ನಿಯಂತ್ರಣ ಕ್ರಮ ಮುಂದುವರಿಕೆ!

Last Updated 28 ಅಕ್ಟೋಬರ್ 2021, 14:31 IST
ಅಕ್ಷರ ಗಾತ್ರ

ನವದೆಹಲಿ: ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿರುವುದರಿಂದ ನ. 30ರವರೆಗೆ ರಾಷ್ಟ್ರವ್ಯಾಪಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಮುಂದುವರಿಸಲು ಕೇಂದ್ರ ಸರ್ಕಾರವು ಗುರುವಾರ ನಿರ್ಧರಿಸಿದೆ.

‘ಕೋವಿಡ್‌–19 ಹರಡುವುದನ್ನು ತಡೆಯಲು ಸದ್ಯ ಜಾರಿಯಲ್ಲಿರುವ ಮಾರ್ಗಸೂಚಿಗಳು ನವೆಂಬರ್ 30ರವರೆಗೆ ಮುಂದುವರಿಯುತ್ತವೆ’ ಎಂದುಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ದೈನಂದಿನ ಪ್ರಕರಣಗಳು ಮತ್ತು ಒಟ್ಟಾರೆ ರೋಗಿಗಳ ಸಂಖ್ಯೆ ಸ್ಥಿರವಾಗಿ ಕ್ಷೀಣಿಸುತ್ತಿದೆ. ಆದರೆ ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಸೋಂಕು ಹರಡುತ್ತಿದೆ ಎಂದೂ ಅವರು ಹೇಳಿದ್ದಾರೆ.

‘ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುವ ಸಾಧ್ಯತೆಯನ್ನು ತಡೆಗಟ್ಟಲು ಹಬ್ಬದ ಋತುವಿನಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ನಿಯಮ ಅನುಸರಣೆ ಎನ್ನುವ ಐದು ಕಾರ್ಯತಂತ್ರಗಳಿಗೆ ಆದ್ಯತೆ ನೀಡಬೇಕಾಗಿದೆ. ಅರ್ಹರಿಗೆ ತಪ್ಪದೇ ಎರಡನೇ ಡೋಸ್ ಲಸಿಕೆ ನೀಡಬೇಕು’ ಎಂದು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT