ಶುಕ್ರವಾರ, ಡಿಸೆಂಬರ್ 3, 2021
20 °C

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೆ.3ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 3ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.

ಸದ್ಯ ಶೇ 28ರಷ್ಟು ತುಟ್ಟಿ ಭತ್ಯೆ ನೀಡಲಾಗುತ್ತಿದ್ದು, ಹೊಸ ಆದೇಶದಂತೆ ಅದು ಶೇ 31ಕ್ಕೆ ಏರಿಕೆಯಾಗಲಿದೆ. ಜುಲೈ 1ರಿಂದ ಆದೇಶ ಪೂರ್ವಾನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. 

47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಇದರ ಲಾಭ ದೊರೆಯಲಿದೆ. 

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಸರ್ಕಾರದ ತೀರ್ಮಾನವನ್ನು ಗುರುವಾರ ಘೋಷಿಸಿದರು. ತುಟ್ಟಿ ಭತ್ಯೆ ಹೆಚ್ಚಿಸುವ ಈ ನಿರ್ಧಾರದಿಂದ ಸರ್ಕಾರಕ್ಕೆ ವಾರ್ಷಿಕ ₹9,488 ಕೋಟಿ ಹೊರೆ ಉಂಟಾಗಲಿದೆ ಎಂದು ಅವರು ಹೇಳಿದರು. 

ಈ ಮೊದಲು ಜುಲೈನಲ್ಲಿ ಸರ್ಕಾರ ತುಟ್ಟಿ ಭತ್ಯೆಯನ್ನು ಶೇ .17 ರಿಂದ ಶೇ .28 ಕ್ಕೆ ಹೆಚ್ಚಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು