ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ 2023ರ ಜನವರಿ 1ರಿಂದಲೇ ಅನ್ವಯಿಸುವಂತೆ ಶೇ 4ರಷ್ಟು ತುಟ್ಟಿ ಭತ್ಯೆಯನ್ನು (ಡಿಎ) ಕೇಂದ್ರ ಸಂಪುಟ ಶುಕ್ರವಾರ ಹೆಚ್ಚಿಸಿದೆ. ಇದರಿಂದಾಗಿ ಡಿಎ ಪ್ರಮಾಣ ಶೇ 42ಕ್ಕೆ ಏರಿಕೆಯಾಗಿದೆ.
47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಈ ಭತ್ಯೆ ಸಿಗಲಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕ ₹12,815.60 ಕೋಟಿ ಹೊರೆಯಾಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.