ಜುಲೈನಲ್ಲೇ ಸಂಸತ್ ಮುಂಗಾರು ಅಧಿವೇಶನ: ಕೇಂದ್ರ ಸಚಿವ ಜೋಶಿ ವಿಶ್ವಾಸ

ನವದೆಹಲಿ: ‘ಮುಂಗಾರು ಅಧಿವೇಶನವು ಜುಲೈ ತಿಂಗಳಲ್ಲಿ ಸುಗಮವಾಗಿ ನಡೆಯುವ ವಿಶ್ವಾಸವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಂಗಳವಾರ ತಿಳಿಸಿದ್ದಾರೆ.
ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಆರಂಭವಾದ ಬಳಿಕ ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿತ್ತು. ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಪಡಿಸಲಾಗಿತ್ತು.
ಕಳೆದ ವರ್ಷ ಮುಂಗಾರು ಅಧಿವೇಶನವನ್ನು ಜುಲೈ ಬದಲು ಸೆಪ್ಟೆಂಬರ್ನಲ್ಲಿ ನಡೆಸಲಾಗಿತ್ತು. ಈ ಬಾರಿ ಮುಂಗಾರು ಅಧಿವೇಶನವನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಲೋಕಸಭೆ ಮತ್ತು ರಾಜ್ಯಸಭೆಯ ಬಹುತೇಕ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ, ಕೋವಿಡ್–19 ವಿರುದ್ಧದ ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ಪಡೆದಿದ್ದಾರೆ. ಹೀಗಾಗಿ, ಜುಲೈನಲ್ಲಿ ಅಧಿವೇಶನ ನಡೆಯುವ ಸಾಧ್ಯತೆಗಳು ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಅಮರಾವತಿ ಸಂಸದೆಯ ಜಾತಿ ಪ್ರಮಾಣಪತ್ರ ರದ್ದುಪಡಿಸಿದ ಬಾಂಬೆ ಹೈಕೋರ್ಟ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.