ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರದು ಸ್ವತಂತ್ರ ಅಲ್ಪಸಂಖ್ಯಾತ ಸಚಿವಾಲಯ?

Last Updated 2 ಅಕ್ಟೋಬರ್ 2022, 16:33 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ತೆಗೆದು ಹಾಕುವ ಸಾಧ್ಯತೆಯಿದ್ದು, ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸಿ, ಇಲಾಖೆಯನ್ನಾಗಿಸುವ ಸಾಧ್ಯತೆ ಇದೆ.

‘ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಬಂದಾಗಿನಿಂದಲೂಅಲ್ಪಸಂಖ್ಯಾತ ವ್ಯವಹಾರಗಳ ಸ್ವತಂತ್ರ ಸಚಿವಾಲಯದ ಅಗತ್ಯವಿಲ್ಲವೆಂದೇ ಪ್ರತಿಪಾದಿಸಲಾಗಿತ್ತು. ಅದಕ್ಕೆ ಬದಲಾಗಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆಯನ್ನಾಗಿಸಿ, ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ತರಲು ಬಯಸಿದೆ. ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳುವಿಲೀನದ ನಂತರವೂ ಮುಂದುವರಿಯುತ್ತವೆ. ಕಾಂಗ್ರೆಸ್‌ ಆಡಳಿತದಲ್ಲಿ ತಂದಿರುವ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಬದಲಿಸುವುದು ಮೋದಿ ಸರ್ಕಾರದ ಗುರಿ. ತುಷ್ಟೀಕರಣ ನೀತಿಯನ್ನು ಸರ್ಕಾರ ಅಳವಡಿಸಿಕೊಳ್ಳುವುದಿಲ್ಲ’ ಎಂದು ಸರ್ಕಾರದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಮುಸ್ಲಿಮರು, ಕ್ರೈಸ್ತರು, ಬೌದ್ಧರು, ಸಿಖ್ಖರು, ಪಾರ್ಸಿ, ಜೈನರಿಗೆ ಸಂಬಂಧಿಸಿದ ವಿಷಯಗಳಿಗೆ ಗಮನಹರಿಸಲು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಇದ್ದಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು 2006ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ರಚನೆ ಮಾಡಿತ್ತು.

‘ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ ಸಮಾಜ ಧ್ರುವೀಕರಿಸಲು, ಅಲ್ಪಸಂಖ್ಯಾತರನ್ನು ತುಳಿಯಲು ಎಲ್ಲ ಅವಕಾಶಗಳನ್ನು ಬಳಸುತ್ತಿದೆ. ಸಮಾಜ ಧ್ರುವೀಕರಿಸುವ ಬಿಜೆಪಿಯ ಮತ್ತೊಂದು ಪ್ರಯತ್ನ ಇದು’ ಎಂದು ರಾಜ್ಯಸಭೆಯ ಸದಸ್ಯ ಕಾಂಗ್ರೆಸ್‌ನ ಸೈಯದ್‌ ನಸೀರ್‌ ಹುಸೇನ್‌ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT