ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನಕ್ಕೆ ಒಳಗಾದ ಮಹಿಳೆಯರಿಗೆ ನೆರವು: ಸಹಾಯವಾಣಿಗೆ ಚಾಲನೆ

Last Updated 27 ಜುಲೈ 2021, 16:35 IST
ಅಕ್ಷರ ಗಾತ್ರ

ನವದೆಹಲಿ: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನೆರವು ಒದಗಿಸುವ ಸಲುವಾಗಿ ದಿನ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿಗೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.

ರಾಷ್ಡ್ರೀಯ ಮಹಿಳಾ ಆಯೋಗ ಸ್ಥಾಪಿಸಿರುವ ಈ ಸಹಾಯವಾಣಿಗೆ (ಸಹಾಯವಾಣಿ ಸಂಖ್ಯೆ 7827170170) ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಸಂಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ಸರ್ಕಾರ ಹಾಗೂ ಆಯೋಗ ಸದಾ ಸಿದ್ಧ ಎಂಬ ಸಂದೇಶವನ್ನು ಈ ಸಹಾಯವಾಣಿ ರವಾನಿಸಿದೆ’ ಎಂದು ಹೇಳಿದರು.

ದೌರ್ಜನಕ್ಕೆ ಒಳಗಾದ ಮಹಿಳೆಯರಿಗೆ ಪೊಲೀಸ್‌ ಇಲಾಖೆ, ಆಸ್ಪತ್ರೆಗಳು, ಜಿಲ್ಲಾ ಕಾನೂನು ಸೇವೆಗಳು ಹಾಗೂ ಮಾನಸಿಕ ಆರೋಗ್ಯ ಸೇವೆಗಳನ್ನು ನೀಡುವ ಕೇಂದ್ರಗಳ ನೆರವನ್ನು ಈ ಸಹಾಯವಾಣಿ ಒದಗಿಸುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT