ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ಪುನರ್ವಸತಿ: 6 ತಿಂಗಳ ಹೊಸ ಕೋರ್ಸ್‌

Last Updated 19 ಮೇ 2021, 15:13 IST
ಅಕ್ಷರ ಗಾತ್ರ

ನವದೆಹಲಿ: ಅಂಗವಿಕಲರ ಪುನರ್ವಸತಿಗೆ ಸಂಬಂಧಿಸಿದಂತೆ ಆರು ತಿಂಗಳ ಕೋರ್ಸ್‌ ಅನ್ನು ಕೇಂದ್ರ ಸರ್ಕಾರ ಬುಧವಾರ ಆರಂಭಿಸಿದೆ.

‘ಸಮುದಾಯ ಆಧಾರಿತ ಒಳಗೊಳ್ಳುವಿಕೆ ಅಭಿವೃದ್ಧಿ’ (ಸಿಬಿಐಡಿ) ಕಾರ್ಯಕ್ರಮ ಇದಾಗಿದೆ. ಸಮುದಾಯ ಮಟ್ಟದಲ್ಲಿ ಪುನರ್ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಾರ್ಯಕರ್ತರನ್ನು ಸಿದ್ಧಗೊಳಿಸುವ ಉದ್ದೇಶವನ್ನು ಇದು ಹೊಂದಿದೆ. ಇವರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜತೆ ಕಾರ್ಯನಿರ್ವಹಿಸಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾದ ತಜ್ಞರನ್ನು ಒಳಗೊಂಡ ಸಮಿತಿಯ ಈ ಕೋರ್ಸ್‌ಗೆ ಪಠ್ಯಕ್ರಮವನ್ನು ಸಿದ್ಧಪಡಿಸಿದೆ. ಭಾರತೀಯ ಪುನರ್ವಸತಿ ಮಂಡಳಿ ಮತ್ತು ಮೆಲ್ಬೊರ್ನ್‌ ವಿಶ್ವವಿದ್ಯಾಲಯವು ಈ ಪಠ್ಯಕ್ರಮ ಸಿದ್ಧಪಡಿಸುವ ಕಾರ್ಯದಲ್ಲಿ ಭಾಗಿಯಾಗಿದ್ದವು.

ಜ್ಞಾನ ಮತ್ತು ಕೌಶಲ ವೃದ್ಧಿಗೊಳಿಸುವ ಅಂಶಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ. ಈ ಕಾರ್ಯಕರ್ತರನ್ನು ‘ದಿವ್ಯಾಂಗ ಮಿತ್ರ’ ಎಂದು ಕರೆಯಲಾಗುವುದು.

ಆರಂಭದಲ್ಲಿ ಈ ಕೋರ್ಸ್‌ ಇಂಗ್ಲಿಷ್‌, ಹಿಂದಿ ಮತ್ತು ಗುಜರಾತಿ, ಮರಾಠಿ, ಒಡಿಯಾ, ಬೆಂಗಾಲಿ, ತೆಲುಗು, ತಮಿಳು ಮತ್ತು ಗಾರೊ ಭಾಷೆಯಲ್ಲಿ ಲಭ್ಯವಾಗಲಿದೆ. ಮೊದಲ ಬ್ಯಾಚ್‌ನ ತರಗತಿಗಳು ಆಗಸ್ಟ್‌ನಲ್ಲಿ ಆರಂಭವಾಗಲಿದ್ದು, ಸುಮಾರು 600 ವಿದ್ಯಾರ್ಥಿಗಳು ಈ ಕೋರ್ಸ್‌ನ ಪ್ರಯೋಜನ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಪ್ರಮಾಣಪತ್ರವನ್ನು ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT