ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ: ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ –ಕೇಂದ್ರ ಸರ್ಕಾರ

Last Updated 17 ಮೇ 2021, 9:51 IST
ಅಕ್ಷರ ಗಾತ್ರ

ನವದೆಹಲಿ: ‘ಕೋವಿಡ್‌ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರವು ಕಾರ್ಯವಿಧಾನವನ್ನು ರೂಪಿಸಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು(ಡಬ್ಲ್ಯೂಸಿಡಿ) ತಿಳಿಸಿದೆ.

ಕೋವಿಡ್‌ನಿಂದಾಗಿ ಹೆತ್ತವರನ್ನು ಕಳೆದುಕೊಂಡಿರುವ ಮಕ್ಕಳನ್ನು ದತ್ತು ಪಡೆದುಕೊಳ್ಳುವ ಕುರಿತಾದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನು ಗಮನಿಸಿದ ಡಬ್ಲ್ಯೂಸಿಡಿ ಸಾರ್ವಜನಿಕವಾಗಿ ಈ ನೋಟಿಸ್‌ ಪ್ರಕಟಿಸಿದೆ.

‘ಈ ರೀತಿ ಕಾನೂನು ನಿಬಂಧನೆಗಳ ವಿರುದ್ಧವಾಗಿ ಮಕ್ಕಳನ್ನು ದತ್ತು ಪಡೆಯಬಾರದು. ಸರ್ಕಾರವು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಪುನರ್ವಸತಿಗೆ ಸಂಬಂಧಿಸಿದಂತೆ ಕಾರ್ಯವಿಧಾನಗಳನ್ನು ರೂಪಿಸಿದೆ’ ಎಂದು ಡಬ್ಲ್ಯೂಸಿಡಿ ಸಚಿವಾಲಯವು ಹೇಳಿದೆ.

‘ಇಬ್ಬರು ಪೋಷಕರನ್ನು ಕಳೆದುಕೊಂಡ ಮಗುವನ್ನು 24 ಗಂಟೆಗಳ ಒಳಗೆ ಜಿಲ್ಲಾ ಮಕ್ಕಳಾ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಮುಂದೆ ಹಾಜರುಪಡಿಸಬೇಕು. ಈ ಸಂಬಂಧ ವಿಚಾರಣೆ ನಡೆಸಿ ಸಿಡಬ್ಲ್ಯೂಸಿ, ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದರ ಕುರಿತು ನಿರ್ಧಾರ ಕೈಗೊಳ್ಳಲಿದೆ’ ಎಂದು ಸಚಿವಾಲಯವು ಹೇಳಿದೆ.

‘ಒಂದು ವೇಳೆ ಮಗುವನ್ನು ರಕ್ತ ಸಂಬಂಧಿಕರು ನೋಡಿಕೊಳ್ಳುತ್ತಿದ್ದರೆ, ಸಿಡಬ್ಲ್ಯೂಸಿ ನಿಯಮಿತವಾಗಿ ಆ ಮಗುವಿನ ಯೋಗಕ್ಷೇಮವನ್ನು ವಿಚಾರಿಸಲಿದೆ. ಕೋವಿಡ್‌ ಸೋಂಕಿನಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಗುವಿನ ಬಗ್ಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ರಲ್ಲಿ ಮಾಹಿತಿ ಹಂಚಿಕೊಳ್ಳಬಹುದು ’ ಎಂದು ಸಚಿವಾಲಯವು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT