ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಖರೀದಿಗೆ ಪರ್ಯಾಯ ಮಾರುಕಟ್ಟೆಗೆ ಸರ್ಕಾರದ ಹುಡುಕಾಟ: ಹರದೀಪ್‌ ಸಿಂಗ್ ಪುರಿ

Last Updated 14 ಮಾರ್ಚ್ 2022, 11:10 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಇಂಧನ ಖರೀದಿಗೆ ಸರ್ಕಾರ ಪರ್ಯಾಯ ಮಾರುಕಟ್ಟೆಯನ್ನು ಹುಡುಕುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್‌ ಸಿಂಗ್ ಪುರಿ ಸೋಮವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಂಧನ ಖರೀದಿಗೆ ಅನುಕೂಲವಾಗುವಂತೆ ಕರೆನ್ಸಿ, ಮಾರುಕಟ್ಟೆಯಲ್ಲಿ ತೈಲ ಪೂರೈಕೆ, ವಿಮೆ ಮತ್ತು ಸರಕು ಸಾಗಣೆಯಂತಹ ಎಲ್ಲಾ ಆಯ್ಕೆಗಳ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.

ಡೀಸೆಲ್ ದರವನ್ನು ಕಡಿಮೆ ಮಾಡಲು ಸರ್ಕಾರ ಉದ್ದೇಶಿಸಿದೆಯೇ ಎಂಬ ಕಾಂಗ್ರೆಸ್ ಸಂಸದ ಶಕ್ತಿ ಸಿಂಗ್ ಗೋಹಿಲ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, 'ಸಾಮಾನ್ಯ ಜನರಿಗೆ ಹೆಚ್ಚಿನ ಪ್ರಯೋಜನ ಲಭಿಸಬೇಕು ಎಂದು ನಾವು ಭಾವಿಸಿದಾಗಲೆಲ್ಲಾ, ಇಂಧನ ಬೆಲೆಯನ್ನು ಕಡಿಮೆ ಮಾಡಿದ್ದೇವೆ. 2021ರ ನವೆಂಬರ್ ನಲ್ಲಿ ನಾವು ಇಂಧನ ಬೆಲೆಯನ್ನು ₹ 10 ರೂಪಾಯಿಗಳಷ್ಟು ಇಳಿಸಿದ್ದೇವೆ' ಎಂದು ಹೇಳಿದರು.

ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಪೆಟ್ರೋಲ್ ಬೆಲೆಯು 63 ಬಾರಿ ಮತ್ತು ಡೀಸೆಲ್ ಬೆಲೆಯು 61 ಬಾರಿ ಏರಿಕೆಯಾಗಿದೆ. ನವೆಂಬರ್‌ನಿಂದ ಸರ್ಕಾರ ಬೆಲೆ ಏರಿಕೆ ಮಾಡಿಲ್ಲ. ಈಗಿರುವ ಬೆಲೆ ಹಾಗೆ ಇರಲಿದೆಯಾ ಎಂದು ಸರ್ಕಾರಕ್ಕೆ ಪ್ರಶ್ನಿಸಿದ ಅವರು, ಬೆಲೆ ಏರಿಕೆಯಾಗುತ್ತದೆಯೇ ಅಥವಾ ಇಲ್ಲವೇ ಎಂದು ಕೇಳಿದರು.

'ವೆನೆಜುವೆಲಾ ಮತ್ತೊಂದು ದೇಶದಿಂದ ನಿರ್ಬಂಧಗಳಿಗೆ ಒಳಪಟ್ಟಿರುವ ದೇಶವಾಗಿದೆ. ನಿರ್ಬಂಧಕ್ಕೊಳಗಾಗಿರುವ ಇತರ ದೇಶಗಳಿಂದ ಇಂಧನ ಲಭ್ಯವಾಗುವ ಭರವಸೆ ಮತ್ತು ನಿರೀಕ್ಷೆ ಇದೆ. ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟದ (ಒಪೆಕ್) ದೇಶಗಳು ತಮ್ಮ ತೈಲ ಉತ್ಪಾದನೆಯನ್ನು ಹೆಚ್ಚಿಸುತ್ತಿವೆ ಮತ್ತು ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಸಮುದಾಯದ ಮನವೊಲಿಸಲಾಗುತ್ತಿದೆ' ಎಂದು ಪುರಿ ತಿಳಿಸಿದರು.

ಕೇಂದ್ರ ಸರ್ಕಾರವಾಗಲಿ ಅಥವಾ ತೈಲ ಕಂಪನಿಗಳಾಗಲಿ ತೈಲ ಬಾಂಡ್‌ಗಳನ್ನು ನಿಲ್ಲಿಸಲು ಹೋಗುವುದಿಲ್ಲ. ಇಂಧನ ಬೆಲೆಯನ್ನು ಕಾಯ್ದುಕೊಳ್ಳಲು ಎಲ್ಲಾ ರೀತಿಯ ಕಾನೂನುಬದ್ಧ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT