ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ವರ್ಷ ಮೇಲ್ಪಟ್ಟವರಿಗೂ ಬೂಸ್ಟರ್ ಡೋಸ್: ಕೇಂದ್ರ ಸರ್ಕಾರ ಚಿಂತನೆ

Last Updated 21 ಮಾರ್ಚ್ 2022, 19:36 IST
ಅಕ್ಷರ ಗಾತ್ರ

ನವದೆಹಲಿ:18 ವರ್ಷ ದಾಟಿದ ದೇಶದ ಎಲ್ಲಾ ವಯಸ್ಕರಿಗೂ ಬೂಸ್ಟರ್ ಡೋಸ್ ಪಡೆಯಲು ಅವಕಾಶ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿಶ್ವದ ಕೆಲವು ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜತೆಗೆ, ಬೂಸ್ಟರ್ ಡೋಸ್ ಲಸಿಕೆ ಪಡೆಯದೆ ವಿದೇಶಗಳಿಗೆ ಪ್ರಯಾಣಿಸಲು ಕಷ್ಟವಾಗುತ್ತಿರುವುದರಿಂದ ಈ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.

2ನೇ ಡೋಸ್ ಲಸಿಕೆ ಪಡೆದ 9 ತಿಂಗಳಿನಿಂದ 39 ವಾರ ಪೂರ್ಣಗೊಂಡವರಿಗೆ ಆದ್ಯತೆ ಮೇರೆಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ.

ದೇಶದಲ್ಲಿ ಸದ್ಯ 181 ಕೋಟಿ ಡೋಸ್‌ ಕೋವಿಡ್ ಲಸಿಕೆ ನೀಡಲಾಗಿದ್ದು ಇದರಲ್ಲಿ 2 ಕೋಟಿಗೂ ಹೆಚ್ಚು ಬೂಸ್ಟರ್‌ ಡೋಸ್‌ಗಳಾಗಿವೆ.ಪ್ರಸ್ತುತ ಭಾರತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

18 ವರ್ಷದವರಿಗೂಬೂಸ್ಟರ್‌ ಡೋಸ್ ಲಸಿಕೆ ಉಚಿತವಾಗಿ ನೀಡಬೇಕೆ ಎಂಬ ಬಗ್ಗೆ ಸರ್ಕಾರವು ಚರ್ಚಿಸುತ್ತಿದೆ. ಜತೆಗೆ ಎಲ್ಲ ವಯಸ್ಕರಿಗೂ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅವಕಾಶ ನೀಡಬೇಕು ಎಂದು ಸಂಸದರೂ ಸಹ ಒತ್ತಾಯಿಸಿದ್ದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT