ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌: ಚಿಂತನೆ

Last Updated 9 ಆಗಸ್ಟ್ 2022, 14:14 IST
ಅಕ್ಷರ ಗಾತ್ರ

ನವದೆಹಲಿ: ‘18 ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್‌ ಅಥವಾ ಕೋವ್ಯಾಕ್ಸಿನ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ನೀಡಲು ಚಿಂತಿಸಲಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯವು ಶೀಘ್ರವೇ ಇದಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ’ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

‘ಕೋವಿಡ್‌–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್‌ಟಿಎಜಿಐ) ಕೋರ್ಬೆವ್ಯಾಕ್ಸ್‌ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್‌ ಆಗಿ ನೀಡಲು ಶಿಫಾರಸು ಮಾಡಿದ್ದು, ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡುವ ಸಾಧ್ಯತೆ ಇದೆ’ ಎಂದು ಮೂಲಗಳು ಹೇಳಿವೆ.

ಕೋರ್ಬೆವ್ಯಾಕ್ಸ್‌ ಲಸಿಕೆಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕೋವಿಡ್‌–19 ರೋಗ ನಿರೋಧಕ ಕಾರ್ಯಕ್ರಮದಡಿ ಸದ್ಯ 12 ರಿಂದ 14 ವರ್ಷದ ಮಕ್ಕಳಿಗೆ ಇದನ್ನು ನೀಡಲಾಗುತ್ತಿದೆ.

‘ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್‌ ಪಡೆದಿದ್ದವರಿಗೆ ಪ್ರಾಯೋಗಿಕವಾಗಿ ಕೋರ್ಬೆವ್ಯಾಕ್ಸ್‌ ಲಸಿಕೆ ನೀಡಿದ್ದಾಗ ಅವರ ದೇಹದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಪ್ರತಿಕಾಯಗಳು ವೃದ್ಧಿಯಾಗಿದ್ದನ್ನು ಕೋವಿಡ್‌–19 ಕಾರ್ಯಪಡೆ ಗಮನಿಸಿತ್ತು. ಈ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್‌ ಆಗಿ ನೀಡಲು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಜೂನ್‌ 4ರಂದೇ ಒಪ್ಪಿಗೆ ನೀಡಿತ್ತು’ ಎಂದೂ ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT