ಮಂಗಳವಾರ, ಸೆಪ್ಟೆಂಬರ್ 21, 2021
29 °C

ಸಂಸತ್ತಿನಲ್ಲಿ ಮಹತ್ವದ ವಿಷಯಗಳ ಚರ್ಚೆಗೆ ಅವಕಾಶ ನೀಡದ ಸರ್ಕಾರ: ರಾಹುಲ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರೀಯ ಮಹತ್ವದ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ವಿರೋಧ ಪಕ್ಷಗಳಿಗೆ ಸರ್ಕಾರ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ದೂರಿದ್ದಾರೆ.

ಸಂಸತ್ತಿನ ಅತ್ಯಮೂಲ್ಯ ಸಮಯವನ್ನು ಸರ್ಕಾರ ವ್ಯರ್ಥ ಮಾಡಬಾರದು. ಹಣದುಬ್ಬರ, ರೈತರ ಸಮಸ್ಯೆಗಳು ಮತ್ತು ಪೆಗಾಸಸ್‌ ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸದರು ಜನರ ಧ್ವನಿಯಾಗಬೇಕು. ರಾಷ್ಟ್ರೀಯ ಮಹತ್ವದ ವಿಷಯಗಳ ಬಗ್ಗೆ ಸಂಸದರು ಚರ್ಚಿಸುವುದು ಅಗತ್ಯವಿದೆ. ಆದರೆ, ಸರ್ಕಾರಕ್ಕೆ ಇಂತಹ ಯಾವುದೇ ಚರ್ಚೆ ಬೇಡವಾಗಿದೆ ಎಂದು ಟೀಕಿಸಿದ್ದಾರೆ.

ಪೆಗಾಸಸ್‌ ಗೂಢಚರ್ಯೆ ವಿಷಯದ ಬಗ್ಗೆ ಸಂಸತ್‌ ಅಧಿವೇಶನದಲ್ಲಿ ಗದ್ದಲ ಮುಂದುವರಿದಿದೆ. ಗುರುವಾರವೂ ರಾಜ್ಯಸಭೆ, ಲೋಕಸಭೆ ಕಲಾಪವನ್ನು ಎರಡು ಬಾರಿ ಮುಂದೂಡಲಾಯಿತು. ಸುಪ್ರೀಂ ಕೋರ್ಟ್‌ ನಿಗಾದಲ್ಲಿ ಗೂಢಚರ್ಯೆ ಬಗ್ಗೆ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು