ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರ್‌ಪೋರಾ ಎನ್‌ಕೌಂಟರ್‌ ಪ್ರಕರಣ: ಮ್ಯಾಜಿಸ್ಟೇಟ್ ತನಿಖೆಗೆ ಆದೇಶ

Last Updated 18 ನವೆಂಬರ್ 2021, 7:12 IST
ಅಕ್ಷರ ಗಾತ್ರ

ಶ್ರೀನಗರ: ಹೈದರ್‌ಪೋರಾ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಎಂ ಶ್ರೇಣಿಯ ಅಧಿಕಾರಿಯಿಂದ ಮ್ಯಾಜಿಸ್ಟ್ರೇಟ್ ತನಿಖೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.

ಕಾಲಮಿತಿಯಲ್ಲಿ ವರದಿ ಸಲ್ಲಿಸಿದ ತಕ್ಷಣ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ಅಮಾಯಕ ನಾಗರಿಕರ ಜೀವಗಳನ್ನು ರಕ್ಷಿಸುವ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 16ರಂದು ಹೈದರ್ ಪೋರಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉದ್ಯಮಿಗಳು ಮೃತಪಟ್ಟಿದ್ದರು. ಅವರು ಭಯೋತ್ಪಾದಕರ ಸಂಪರ್ಕ ಹೊಂದಿದ್ದವರು ಎಂದು ಭದ್ರತಾ ಪಡೆ ವಾದಿಸಿದರೆ, ಅವರು ಅಮಾಯಕ ನಾಗರಿಕರು ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ.

ಹೀಗಾಗಿ, ಪ್ರಕರಣದ ತನಿಖೆಗೆ ಆದೇಶಿಸಲಾಗಿದ್ದು, ವಿವಾದಾತ್ಮಕ ಪೊಲೀಸ್ ಕಾರ್ಯಾಚರಣೆಯ ಕುರಿತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟೇಟ್ ತನಿಖೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT