ಮಂಗಳವಾರ, ಜೂನ್ 28, 2022
28 °C
ದೇಶದ ಕೆಲವೆಡೆ ಕೋವಿಡ್‌ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ

ಕೈಗಾರಿಕೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಕೆಗೆ ಸರ್ಕಾರದ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೆಲವೆಡೆ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎಂಎಸ್‌ಎಂಇ, ಆಹಾರ ಸಂಸ್ಕರಣಾ ಘಟಕಗಳಂತಹ ಕೈಗಾರಿಕೆಗಳಿಗೆ ಮತ್ತು ಮೂಲಸೌಕರ್ಯ ನಿರ್ಮಾಣ ಯೋಜನೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಆಮ್ಲಜನಕ ಉತ್ಪಾದಕ ಘಟಕಗಳಿಗೆ ಅನುಮತಿ ನೀಡಿದೆ.

ಆದರೆ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ ಆಸ್ಪತ್ರೆಗಳು ಮತ್ತು ಇತರೆ ವೈದ್ಯಕೀಯ ಉದ್ದೇಶಗಳಿಗೆ ಇರುವ ವೈದ್ಯಕೀಯ ಆಮ್ಲಜನಕದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿನ ಬೇಡಿಕೆಗಳನ್ನು ಪೂರೈಸಿದ ನಂತರವೇ ಉಳಿದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸಬೇಕು ಎಂದು ಸರ್ಕಾರ ತಿಳಿಸಿದೆ.

ಕೋವಿಡ್‌ ಪ್ರಕರಣಗಳು ಏರಿಕೆಯಾದ ಕಾರಣ, ಕೇಂದ್ರ ಸರ್ಕಾರ ಏಪ್ರಿಲ್ ತಿಂಗಳಲ್ಲಿ ಒಂಬತ್ತು ನಿರ್ದಿಷ್ಟ ಕೈಗಾರಿಕೆಗಳನ್ನು ಹೊರತುಪಡಿಸಿ, ಬೇರೆ ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ ಪೂರೈಸುವುದಕ್ಕೆ ನಿಷೇಧ ಹೇರಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು