ಬುಧವಾರ, ಸೆಪ್ಟೆಂಬರ್ 29, 2021
20 °C

ಕೋವಿಡ್‌: ಹೆತ್ತವರನ್ನು ಕಳೆದುಕೊಂಡ ಮಕ್ಕಳ ಸಹಾಯಧನ ₹ 4,000ಕ್ಕೆ– ಕೇಂದ್ರ ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್-19ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ನೀಡುವ ಮಾಸಿಕ ಆರ್ಥಿಕ ಸಹಾಯವನ್ನು ₹ 2,000 ದಿಂದ ₹ 4,000ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಂದಿನ ಕೆಲವು ವಾರಗಳಲ್ಲಿ ಈ ಪ್ರಸ್ತಾವನೆಯು ಕ್ಯಾಬಿನೆಟ್ ಅನುಮೋದನೆಗೆ ಹೋಗಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುವ ಮಾಸಿಕ ಸಹಾಯ ಧನವನ್ನು ₹ 2,000 ದಿಂದ ₹ 4,000ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋವಿಡ್-19ನಿಂದಾಗಿ ಪೋಷಕರು ಅಥವಾ ಕಾನೂನಾತ್ಮಕ ಪಾಲಕರು/ದತ್ತು ಪಡೆದಿದ್ದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 'ಪಿಎಂ-ಕೇರ್ಸ್ ಫಾರ್ ಚಿಲ್ಡ್ರನ್' ಯೋಜನೆ ಅಡಿಯಲ್ಲಿ ಬೆಂಬಲಿಸಲಾಗುವುದು ಎಂದು ಸರ್ಕಾರವು ಮೇ ತಿಂಗಳಿನಲ್ಲಿ ಘೋಷಿಸಿತ್ತು.

ಈವರೆಗೂ ಈ ಯೋಜನೆಯಡಿ ಸ್ವೀಕರಿಸಿರುವ 3,250 ಅರ್ಜಿಗಳಲ್ಲಿ, ಒಟ್ಟು 667 ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅನುಮೋದಿಸಿದ್ದಾರೆ. ಇಲ್ಲಿಯವರೆಗೆ 467 ಜಿಲ್ಲೆಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು