ಗುರುವಾರ , ನವೆಂಬರ್ 26, 2020
22 °C

ಕೋವಿಡ್‌: ಕೇಂದ್ರದಿಂದ ವಿಶೇಷ ಲಸಿಕೆ ಕಾರ್ಯಕ್ರಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ಸೋಂಕಿಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ, ವಿಶೇಷ ಲಸಿಕಾ ಕಾರ್ಯಕ್ರಮದ ಮೂಲಕ ಅದನ್ನು ವಿತರಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ ಎಂದು ಮೂಲಗಳು ಹೇಳಿವೆ.

ಲಸಿಕೆಯನ್ನು ಕೇಂದ್ರ ಸರ್ಕಾರವೇ ನೇರವಾಗಿ ಖರೀದಿಸಿ, ಕೋವಿಡ್‌ ವಿರುದ್ಧ ಹೋರಾಡುತ್ತಿರುವವರಿಗೆ ಆದ್ಯತೆ ಮೇರೆಗೆ ನೀಡಲು ಉದ್ದೇಶಿಸಲಾಗಿದೆ. ಲಸಿಕೆ ಲಭ್ಯವಾದ ನಂತರ, ಅದರ ಖರೀದಿಗೆ ಪ್ರತ್ಯೇಕವಾಗಿ ಕ್ರಮ ಕೈಗೊಳ್ಳದಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸೂಚನೆಯನ್ನೂ ನೀಡಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮಾಲೋಚನೆ ನಡೆಸಿರುವ ಕೇಂದ್ರ ಸರ್ಕಾರ,  ಆದ್ಯತೆ ಮೇಲೆ ಲಸಿಕೆ ನೀಡಬೇಕಾಗಿರುವ 30 ಕೋಟಿ ಫಲಾನುಭವಿಗಳನ್ನು ಗುರುತಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.

ಈಗಾಗಲೇ ಜಾರಿಯಲ್ಲಿರುವ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಕ್ಕೆ ಸಮಾನಾಂತರವಾಗಿಯೇ ಕೋವಿಡ್‌ ಲಸಿಕೆ ಕಾರ್ಯಕ್ರಮ ನಡೆಯುವುದು. ಆದರೆ, ಈಗ ಚಾಲ್ತಿಯಲ್ಲಿರುವ ಲಸಿಕಾ ಕಾರ್ಯಕ್ರಮಕ್ಕೆ ಬಳಸುತ್ತಿರುವ ತಂತ್ರಜ್ಞಾನ, ಜಾಲವನ್ನೇ ಬಳಸಲಾಗುತ್ತದೆ ಎಂದು ಮೂಲಗಳು ಹೇಳಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು