ಬುಧವಾರ, ಆಗಸ್ಟ್ 17, 2022
25 °C

ಕೇಂದ್ರ ಸರ್ಕಾರದ ನೀತಿಯಿಂದ ಕೋಟ್ಯಂತರ ಜನರ ಉದ್ಯೋಗ ನಷ್ಟ : ರಾಹುಲ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಕೋಟ್ಯಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಮೋದಿ ಸರ್ಕಾರವು ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮೋದಿ ಸರ್ಕಾರದ ನೀತಿಗಳಿಂದಾಗಿ ಜಿಡಿಪಿಯು ಕುಸಿದಿದೆ. ಕೇಂದ್ರ ಸರ್ಕಾರವು ಭಾರತದ ಯುವ ಜನರ ಭವಿಷ್ಯವನ್ನು ಹತ್ತಿಕ್ಕಿದೆ. ಅವರ ಧ್ವನಿಯನ್ನು ಸರ್ಕಾರಕ್ಕೆ ಕೇಳುವಂತೆ ಮಾಡೋಣ. ಇದಕ್ಕಾಗಿ ಗುರುವಾರ ಬೆಳಿಗ್ಗೆ 10 ರಿಂದ 10 ಗಂಟೆಗಳ ಕಾಲ ನಡೆಯಲಿರುವ ಕಾಂಗ್ರೆಸ್‌ ಪಕ್ಷದ ‘ ಸ್ಪೀಕ್ ಅಪ್‌‌ ಫಾರ್‌ ಜಾಬ್ಸ್‌’ ಎಂಬ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದ್ದಾರೆ. 

‘ಮೋದಿ ಸರ್ಕಾರವು ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿತ್ತು. ಆದರೆ ಈ ಆರು ವರ್ಷಗಳಲ್ಲಿ 12 ಕೋಟಿ ಉದ್ಯೋಗ ಸೃಷ್ಟಿಸುವ ಬದಲು 14 ಕೋಟಿ ಜನರ ಕೆಲಸಗಳನ್ನು ಕಿತ್ತುಕೊಂಡಿದೆ’ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲ ಟೀಕಿಸಿದರು.

‘ನೀವೆಲ್ಲರು #SpeakUpForJobs ಅಭಿಯಾನದಲ್ಲಿ ಭಾಗಿಯಾಗಿ ಬಿಜೆಪಿಯ ತಪ್ಪು ನೀತಿಗಳ ವಿರುದ್ಧ ಧ್ವನಿ ಎತ್ತಬೇಕು’ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು