ಗುರುವಾರ , ಮೇ 26, 2022
28 °C

ಸಂಸದರ ಅಮಾನತು ಹಿಂಪಡೆಯಲು ಒತ್ತಾಯ: ರಾಜ್ಯಸಭೆಯಿಂದ ಹೊರನಡೆದ ಕಾಂಗ್ರೆಸ್‌

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂಸದರ ಅಮಾನತು ಆದೇಶವನ್ನು ಹಿಂಪಡೆಯದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್, ರಾಜ್ಯಸಭೆ ಕಲಾಪದಿಂದ ಸೋಮವಾರ ಸಭಾತ್ಯಾಗ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, 12 ಸಂಸದರ ಅಮಾನತು ಆದೇಶ ಹಿಂಪಡೆಯುವುದನ್ನು ಪರಿಗಣಿಸದೆ, ಸರ್ಕಾರವು ವಿರೋಧ ಪಕ್ಷಗಳನ್ನು ಸದನಕ್ಕೆ ಅಡ್ಡಿಪಡಿಸಲು ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದರು.

'ನಾವು ಏನು ಮಾಡಬೇಕು, ಮಾಡಬಾರದು ಎಂಬುದನ್ನು ಸರ್ಕಾರವು ನಿರ್ದೇಶಿಸಲು ಸಾಧ್ಯವಿಲ್ಲ. ನೀವು ಸದನದ ಉಸ್ತುವಾರಿಯಾಗಿರುವುದರಿಂದ, 12 ಸದಸ್ಯರ ಅಮಾನತು ಆದೇಶವನ್ನು ರದ್ದುಗೊಳಿಸಬೇಕೆಂದು ನಾವು ಮನವಿ ಮಾಡುತ್ತೇವೆ. ಸದನಕ್ಕೆ ಅಡ್ಡಿಪಡಿಸಲು ಪ್ರತಿಪಕ್ಷಗಳನ್ನು ಪ್ರೇರೇಪಿಸುವುದೇ ಸರ್ಕಾರದ ಉದ್ದೇಶವಾಗಿದೆ, ಹಾಗಾಗಿಯೇ ನಾವು ಸಭಾತ್ಯಾಗ ಮಾಡಲು ನಿರ್ಧರಿಸಿದ್ದೇವೆ' ಎಂದರು.

ಇದಕ್ಕೂ ಮುನ್ನ ಕಾಂಗ್ರೆಸ್ ಉಪ ನಾಯಕ ಆನಂದ್ ಶರ್ಮಾ ಮಾತನಾಡಿ, ಸದನದ ನಾಯಕರು ಇಲ್ಲೇ ಇದ್ದಾರೆ. ಅಮಾನತು ಆದೇಶವನ್ನು ರದ್ದುಪಡಿಸಬೇಕೆಂದು ನಾವು ಮನವಿ ಮಾಡುತ್ತೇವೆ' ಎಂದರು. ಈ ವೇಳೆ ಡಿಎಂಕೆ ಸಂಸದ ತಿರುಚಿ ಶಿವ ಕೂಡ ಇವರ ಹೇಳಿಕೆಯನ್ನ ಪುನರುಚ್ಛರಿಸಿದರು.

ಅಮಾನತುಗೊಂಡವರಲ್ಲಿ ಕಾಂಗ್ರೆಸ್‌ನ ಸೈಯದ್ ನಾಸೀರ್ ಹುಸೇನ್, ಅಖಿಲೇಶ್ ಪ್ರಸಾದ್ ಸಿಂಗ್, ಪೌಲೊ ದೇವಿ ನೇತಮ್, ಛಾಯಾ ವರ್ಮ, ರಿಪುನ್ ಬೋರಾ ಮತ್ತು ರಾಜಮಣಿ ಪಟೇಲ್ ಸೇರಿದ್ದಾರೆ. ಪ್ರಿಯಾಂಕಾ ಚತುರ್ವೇದಿ, ಅನಿಲ್ ದೇಸಾಯಿ ಶಿವಸೇನಾ ಸಂಸದರು. ಎಲಾಮರಮ್ ಕರೀಮ್ ಸಿಪಿಐಎಂ, ಬಿನಾಯ್ ವಿಶ್ವಂ ಸಿಪಿಐ ಮತ್ತು ದೋಲಾ ಸೇನಾ ಹಾಗೂ ಶಾಂತ ಛೇತ್ರಿ ತೃಣಮೂಲ ಕಾಂಗ್ರೆಸ್‌ ಸಂಸದರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು