ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ರಾಜ್ಯದಲ್ಲಿ ಎಷ್ಟು ಮಂದಿ ಲಸಿಕೆ ಪಡೆದಿದ್ದಾರೆ? ಇಲ್ಲಿದೆ ಮಾಹಿತಿ

ಅಕ್ಷರ ಗಾತ್ರ

ದೆಹಲಿ: ದೇಶದಲ್ಲಿ ಕನಿಷ್ಠ ಒಂದು ಡೋಸ್ ಕೋವಿಡ್‌ ಲಸಿಕೆ ಪಡೆದವರ ರಾಜ್ಯವಾರು ಸಂಖ್ಯೆ ಮತ್ತು ಪ್ರಮಾಣವನ್ನು ಕೇಂದ್ರ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.

ಲಡಾಖ್‌ನಲ್ಲಿ ಒಟ್ಟು ಜನಸಂಖ್ಯೆಯ ಶೇ 89.51ರಷ್ಟು (1,92,420) ಜನರು ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ. ಇದು ದೇಶದಲ್ಲೇ ಗರಿಷ್ಠ. ಉತ್ತರ ಪ್ರದೇಶದ ಒಟ್ಟಾರೆ ಜನಸಂಖ್ಯೆಯ ಶೇ 14.45ರಷ್ಟು (2,34,12,988) ಜನ ಲಸಿಕೆ ಪಡೆದಿದ್ದಾರೆ. ಇದು ದೇಶದಲ್ಲೇ ಅತ್ಯಂತ ಕನಿಷ್ಠ ಎನಿಸಿಕೊಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆಯ ಶೇ 37.37 (61,50,939) ರಷ್ಟು ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.

ಇನ್ನೊಂದೆಡೆ, ಕರ್ನಾಟಕದಲ್ಲಿ ಶೇ 30.83ರಷ್ಟು (1,72,43,110) ಮಂದಿ ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.

ದೇಶದಲ್ಲಿ ಈ ವರೆಗೆ 21,01,66,746 ಮಂದಿ ಲಸಿಕೆ ಪಡೆದಿದ್ದಾರೆ.

ದೇಶದ ಯಾವ ರಾಜ್ಯದಲ್ಲಿ ಎಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ.

ಯಾವ ರಾಜ್ಯದಲ್ಲಿ ಎಷ್ಟು ಲಸಿಕೆ ನೀಡಲಾಗಿದೆ?
ಯಾವ ರಾಜ್ಯದಲ್ಲಿ ಎಷ್ಟು ಲಸಿಕೆ ನೀಡಲಾಗಿದೆ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT