ಸ್ವಾತಂತ್ರ್ಯ ಯೋಧರ ಪಿಂಚಣಿ ಯೋಜನೆ 2026ರವರೆಗೆ ಮುಂದುವರಿಕೆ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಮೇಲೆ ಅವಲಂಬಿತರಾದವರಿಗೆ ಪಿಂಚಣಿ ನೀಡುವ ನಿಟ್ಟಿನಲ್ಲಿ ₹3274.87 ಕೋಟಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಣವನ್ನು 2025-26ರವರೆಗೆ ಸದ್ಬಳಕೆ ಮಾಡಬಹುದಾಗಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆಯಡಿ(ಎಸ್ಎಸ್ಎಸ್‌ವೈ) ಹಣಕಾಸು ನೆರವು ಪಡೆಯುವ ದೇಶದ 23,566 ಫಲಾನುಭವಿಗಳಿಗೆ ಅನುಕೂಲವಾಗಲಿದೆ.
ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆ 2025-26ರವರೆಗೆ ಮುಂದುವರಿಸುವ ಮತ್ತು ಅದಕ್ಕಾಗಿ ₹3274.87 ಕೋಟಿ ಮೀಸಲಿಡುವ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದೆ. ಅಲ್ಲದೆ ಕೇಂದ್ರ ಸರ್ಕಾರದ ಈ ನಿರ್ಣಯವು ಆಜಾದಿ ಕಾ ಅಮೃತಮಹೋತ್ಸವದ ವರ್ಷದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ನೆನೆಯುವ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಎಸ್ಎಸ್ಎಸ್‌ವೈ ಯೋಜನೆ ಮುಂದುವರಿಸುವ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.