ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೌಡಿ ಮೋದಿ ಕಾರ್ಯಕ್ರಮಕ್ಕೆ ಸರ್ಕಾರ ಹಣ ನೀಡಿಲ್ಲ: ಕೇಂದ್ರ ಸ್ಪಷ್ಟನೆ

Last Updated 17 ಸೆಪ್ಟೆಂಬರ್ 2020, 14:52 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹ್ಯೂಸ್ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದ ಯಾವುದೇ ವೆಚ್ಚವನ್ನು ಸರ್ಕಾರ ಪಾವತಿಸಿಲ್ಲ. ಅದನ್ನು ಟೆಕ್ಸಾಸ್‌ ಇಂಡಿಯಾ ಫೊರಂ ಸಂಸ್ಥೆ ಆಯೋಜಿಸಿತ್ತು ಎಂದು ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

ಹೌಡಿ ಮೋದಿ ಕಾರ್ಯಕ್ರಮದಲ್ಲಿ ಡೊನಾಲ್ಡ್‌ ಟ್ರಂಪ್‌ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕದಲ್ಲಿ ಇರುವ 50 ಸಾವಿರಕ್ಕೂ ಅಧಿಕ ಭಾರತೀಯ ಸಂಜಾತರನ್ನು ಉದ್ದೇಶಿಸಿ ಮಾತನಾಡಿದ್ದರು.

ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ವಿ.ಮುರುಳೀಧರನ್‌, ‘ಅಮೆರಿಕ ಮೂಲದ ಟೆಕ್ಸಾಸ್‌ ಇಂಡಿಯಾ ಫೊರಂ ಸಂಸ್ಥೆ 2019ರ ಸೆ.22ರಂದು ಹೌಡಿ ಮೋದಿ ಹೆಸರಿನ ಕಾರ್ಯಕ್ರಮ ಆಯೋಜಿಸಿತ್ತು. ಅಮೆರಿಕ ಪ್ರವಾಸದ ಭಾಗವಾಗಿ, ಆಯೋಜಕರ ಆಹ್ವಾನದ ಮೇರೆಗೆ ಪ್ರಧಾನಿ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ಸಮುದಾಯದ ಸದಸ್ಯರಾಗಿರುವ ಜುಗಲ್‌ ಮಲಾನಿ ಈ ಸಂಸ್ಥೆಯ ಮುಖ್ಯಸ್ಥ. ಕಾರ್ಯಕ್ರಮದ ಯಾವುದೇ ವೆಚ್ಚವನ್ನಾಗಲಿ ಅಥವಾ ಆಯೋಜಕರಿಗೆ ಯಾವುದೇ ಹಣಕಾಸಿನ ನೆರವನ್ನು ಸರ್ಕಾರ ನೀಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT