ಮಂಗಳವಾರ, ಸೆಪ್ಟೆಂಬರ್ 21, 2021
23 °C

ಸಿಎಎ ನಿಯಮ ರಚನೆಗೆ ಜ.9ರ ತನಕ ಕಾಲಾವಕಾಶ ಕೋರಿದ ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ವಯ ನಿಯಮಗಳನ್ನು ರೂಪಿಸಲು ಮುಂಬರುವ ಜನವರಿ 9 ತನಕ ಕಾಲಾವಕಾಶ ಬೇಕು’ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆಗೆ ಮಂಗಳವಾರ ತಿಳಿಸಿದರು.

ಸಿಎಎ ಅನ್ವಯ ನಿಯಮಗಳನ್ನು ರೂಪಿಸಲು ನೀಡಿದ್ದ ಗಡುವನ್ನು ಸರ್ಕಾರ ಮೀರಿದೆಯೇ ಮತ್ತು ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಕಾಂಗ್ರೆಸ್‌ ಸಂಸದ ಗೌರವ್‌ ಗೊಗೊಯಿ ಅವರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದರು.

ಇದಕ್ಕೆ ಉತ್ತರಿಸಿದ ನಿತ್ಯಾನಂದ ಅವರು, ಕಾಯ್ದೆಯ ಅಧಿಸೂಚನೆಯನ್ನು 2019ರ ಡಿಸೆಂಬರ್ 12 ರಂದು ಹೊರಡಿಸಲಾಗಿದೆ. 2020ರ ಜನವರಿ 10ರಿಂದ ಕಾಯ್ದೆ ಜಾರಿಗೆ ಬಂದಿದೆ' ಎಂದು ಹೇಳಿದರು.

ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳನ್ನು ರೂಪಿಸಲು ಜನವರಿ 9ರ ತನಕ ಸಮಯ ನೀಡುವಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸಮಿತಿಗಳಿಗೆ ಕೋರಲಾಗಿದೆ' ಎಂದು ಅವರು ತಿಳಿಸಿದರು.

ಇದನ್ನೂ ಓದಿ... ಅಂತರರಾಜ್ಯ ಗಡಿ ವಿವಾದ | ಕೇಂದ್ರ ಸರ್ಕಾರದ್ದು ಸಹಾಯಕನ ಪಾತ್ರವಷ್ಟೇ: ನಿತ್ಯಾನಂದ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು