ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಸರ್ಕಾರಿ ಬಂಗಲೆಯಿಂದ ಸಂಸದ ಚಿರಾಗ್ ಪಾಸ್ವಾನ್‌ಗೆ ಕೊಕ್‌

Last Updated 30 ಮಾರ್ಚ್ 2022, 16:20 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಪ್ರತಿಷ್ಠಿತ ಜನಪಥ್‌ನ ನಂ 12 ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದ ಸಂಸದ ಚಿರಾಗ್ ಪಾಸ್ವಾನ್ ಅವರನ್ನು ಕೇಂದ್ರ ಸರ್ಕಾರದ ವಿಶೇಷ ತಂಡ ಬುಧವಾರ ಖಾಲಿ ಮಾಡಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದ ಬಳಿಯೇ ಇರುವ ಈ ಸರ್ಕಾರಿ ಬಂಗಲೆಯನ್ನು ಕೇಂದ್ರ ಸಚಿವರಿಗೆ ನೀಡಲಾಗುತ್ತದೆ. ಪ್ರಧಾನಿ ಮೋದಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಈ ಬಂಗಲೆ ನೀಡಲಾಗಿತ್ತು. ಅವರ ನಿಧನದ ಬಳಿಕ ಈ ನಿವಾಸ ಖಾಲಿ ಮಾಡುವಂತೆ ಚಿರಾಗ್ ಅವರಿಗೆ ಕಳೆದ ವರ್ಷ ನೋಟಿಸ್ ನೀಡಲಾಗಿತ್ತು ಎನ್ನಲಾಗಿದೆ.

ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಅಡಿ ಬರುವ ಎಸ್ಟೇಟ್ಸ್ ನಿರ್ದೇಶನಾಲಯವು ಅಧಿಕಾರಿಗಳ ತಂಡವನ್ನು ರವಾನಿಸಿ, ಚಿರಾಗ್ ಅವರನ್ನು ಸರ್ಕಾರಿ ಬಂಗಲೆಯಿಂದ ಖಾಲಿ ಮಾಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT