ಮಂಗಳವಾರ, ಮಾರ್ಚ್ 28, 2023
26 °C

ಸರ್ಕಾರಿ ನೌಕರ ಕೊಲೆ: ಕಾಲುವೆಯಲ್ಲಿ ಶವ ಪತ್ತೆ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಬಾಗ್‌ಪತ್ (ಉತ್ತರ ಪ್ರದೇಶ): ‌ಬಾಗ್‌ಪತ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.

ಮೃತನನ್ನು ಶ್ರೀನಿವಾಸ್ ಪಾಲ್ ಎಂದು ಗುರುತಿಸಲಾಗಿದೆ. ಮೀರತ್‌ ನಗರದ ನಿವಾಸಿಯಾಗಿದ್ದ ಶ್ರೀನಿವಾಸ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಡ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. 

ಮಥುರಾದ ರಾಯ ಪ್ರದೇಶದ ಕಾಲುವೆಯಿಂದ ಶ್ರೀನಿವಾಸ್‌ ಮೃತ ದೇಹವನ್ನು ತೆಗೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಡಿಸೆಂಬರ್ 30ರಂದು ಶ್ರೀನಿವಾಸ್ ಪಾಲ್ ಕಾಣೆಯಾಗಿದ್ದರು. ಈ ಬಗ್ಗೆ ಅವರ ಮಗ ಇಶಾಂಕ್  ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತದೇಹವನ್ನು ಶ್ರೀನಿವಾಸ್‌ ಕುಟುಂಬದವರಿಗೆ  ಹಸ್ತಾಂತರಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ             

ಇದನ್ನು ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು