ಶುಕ್ರವಾರ, ಅಕ್ಟೋಬರ್ 23, 2020
27 °C

ಖಾಸಗಿ ಸಹಭಾಗಿತ್ವದಲ್ಲಿ ಮೃಗಾಲಯಗಳ ಅಭಿವೃದ್ಧಿ: ಪ್ರಕಾಶ್‌ ಜಾವಡೇಕರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಖಾಸಗಿ ಸಹಭಾಗಿತ್ವದಲ್ಲಿ ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ತಿಳಿಸಿದರು. 

ಆನ್‌ಲೈನ್‌ ಕಾರ್ಯಕ್ರಮ ‘ವೈಲ್ಡ್‌ಲೈಫ್‌ ವೀಕ್‌ 2020’ರಲ್ಲಿ ಮಾತನಾಡಿದ ಜಾವಡೇಕರ್‌, ‘ಈ ಯೋಜನೆಗೆ ಪ್ರತ್ಯೇಕ ಅನುದಾನ ಮೀಸಲಿರಿಸಲಾಗುವುದು ಹಾಗೂ ಇದನ್ನು ಮುಂದಿನ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗುವುದು’ ಎಂದರು.

‘ದೇಶದಲ್ಲಿ 160 ಮೃಗಾಲಯಗಳಿವೆ. ಮಕ್ಕಳು ಇವುಗಳಿಗೆ ಭೇಟಿ ನೀಡಲು ಉತ್ಸುಕರಾಗಿರುತ್ತಾರೆ. ಇವರ ಅನುಭವವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಯೋಜನೆ ರೂಪಿಸುವಾಗ ರಾಜ್ಯ ಸರ್ಕಾರಗಳ ಸಲಹೆ, ಸೂಚನೆಗಳನ್ನೂ ಪರಿಗಣಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು