ಶನಿವಾರ, ಸೆಪ್ಟೆಂಬರ್ 18, 2021
28 °C

ಶಾಲೆಯಿಂದ ಹೊರಗುಳಿದ 15 ಕೋಟಿ ಮಕ್ಕಳನ್ನು ವಾಪಸ್‌ ಕರೆತರಲಿದ್ದೇವೆ: ಪ್ರಧಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಶಾಲೆಯಿಂದ ಹೊರಗುಳಿದಿರುವ ಸುಮಾರು 15 ಕೋಟಿ ಮಕ್ಕಳನ್ನು ಶಿಕ್ಷಣ ವ್ಯವಸ್ಥೆಗೆ ವಾಪಸ್‌ ಕರೆತರಲು ಕೇಂದ್ರ ಸರ್ಕಾರವು ಬಯಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಿಳಿಸಿದ್ದಾರೆ.

ʼಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆʼ ಕುರಿತ ವಿಶೇಷ ವರ್ಚುವಲ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

ʼಇಂದು 35 ಕೋಟಿ ಮಕ್ಕಳು ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, 15 ಕೋಟಿ ಮಕ್ಕಳು ಇನ್ನೂ ಶಿಕ್ಷಣದಿಂದ ಹೊರಗುಳಿದಿದ್ದಾರೆ. ನಾವು ಅವರನ್ನೆಲ್ಲ ಮತ್ತೆ ಶಿಕ್ಷಣ ವ್ಯವಸ್ಥೆಗೆ ಕರೆತರಲು ಬಯಸುತ್ತೇವೆʼ ಎಂದು ಹೇಳಿದ್ದಾರೆ.

ಮುಂದುವರಿದು, ಸರ್ಕಾರವು ಇದೇ ಮೊದಲ ಬಾರಿಗೆ ಶಿಕ್ಷಣ ಮತ್ತು ಕೌಶಲ್ಯ ಇಲಾಖೆಗಳನ್ನು ಸಂಯೋಜಿಸುವ ಮೂಲಕ ಉತ್ತಮ ಜೀವನೋಪಾಯಕ್ಕೆ ಹೊಸ ಆಯಾಮ ನೀಡಿದೆ ಎಂದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು