ಗುರುವಾರ , ಆಗಸ್ಟ್ 5, 2021
24 °C

ಕೇಂದ್ರ ಸರ್ಕಾರ ದೇಶವನ್ನು ದುರ್ಬಲಗೊಳಿಸುತ್ತಿದೆ: ರಾಹುಲ್‌ ಗಾಂಧಿ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರವು ದೇಶವನ್ನು ದುರ್ಬಲಗೊಳಿಸಿದ್ದು, ಭಾರತಕ್ಕೆ ಇಷ್ಟೊಂದು ಅಭದ್ರ ಸ್ಥಿತಿ ಎದುರಾಗಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಮತ್ತೆ ದಾಟಿದ್ದು, ಎರಡು ದೇಶಗಳ ನಡುವೆ ಘರ್ಷಣೆ ನಡೆದಿದೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: 

 

 

 

'ವಿದೇಶ ಹಾಗೂ ರಕ್ಷಣಾ ನೀತಿಯನ್ನು ಭಾರತ ಸರ್ಕಾರವು ದೇಶೀಯ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದ್ದು, ನಮ್ಮ ದೇಶವನ್ನು ದುರ್ಬಲಗೊಳಿಸಿದೆ. ಭಾರತ ಎಂದಿಗೂ ಇಷ್ಟೊಂದು ಅಭದ್ರ ಸ್ಥಿತಿ ಎದುರಿಸಿರಲಿಲ್ಲ' ಎಂದು ಹೇಳಿದ್ದಾರೆ.

ಏತನ್ಮಧ್ಯೆ ಪೂರ್ವ ಲಡಾಖ್‌ ಪ್ರದೇಶಗಳ ಆಕ್ರಮಣಕ್ಕಾಗಿ ಭಾರತ ಅಥವಾ ಚೀನಾ ಸೇನೆಯಿಂದ ಯಾವುದೇ ರೀತಿಯ ಪ್ರಯತ್ನಗಳೂ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿರುವ ಭಾರತೀಯ ಸೇನೆ, ಆ ಪ್ರದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಉಭಯ ರಾಷ್ಟ್ರಗಳ ನಡುವೆ ಮಾತುಕತೆ ಮುಂದುವರಿದಿರುವುದಾಗಿ ತಿಳಿಸಿದೆ.

ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ಸೇನೆಗಳನ್ನು ವಾಪಸ್‌ ಕರೆಸಿಕೊಳ್ಳುವ ಕುರಿತು ಈ ವರ್ಷದ ಫೆಬ್ರುವರಿಯಲ್ಲಿ ಎರಡೂ ದೇಶಗಳ ನಡುವೆ ಒಪ್ಪಂದ ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು