ಗುರುವಾರ , ಮಾರ್ಚ್ 4, 2021
25 °C

ಸ್ವಸ್ಥ ರಾಷ್ಟ್ರ ನಿರ್ಮಾಣ: ಆರೋಗ್ಯ ಕ್ಷೇತ್ರಕ್ಕೆ ಒತ್ತು: ವೆಬಿನಾರ್‌ನಲ್ಲಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.

ಕಾಯಿಲೆ ಬರದಂತೆ ತಡೆಗಟ್ಟುವುದು, ಸ್ವಸ್ಥ ಜೀವನಕ್ಕೆ ಉತ್ತೇಜನ, ಎಲ್ಲರಿಗೂ ಆರೋಗ್ಯ ಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ, ವೃತ್ತಿಪರರ ಸಂಖ್ಯೆ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಪ್ರಕಟಿಸಿರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡಿದರು.

‘ಆರೋಗ್ಯ ಕ್ಷೇತ್ರಕ್ಕೆ ಹಿಂದೆಂದೂ ಒದಗಿಸಿರದಷ್ಟು ಅನುದಾನವನ್ನು ಈ ಬಾರಿ ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದು ಈ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರಕ್ಕೆ ಇರುವ ಬದ್ಧತೆಯನ್ನು ತೋರುತ್ತದೆ’ ಎಂದೂ ಹೇಳಿದರು.

‘ಆಧುನಿಕ ತಂತ್ರಜ್ಞಾನದ ಸಮರ್ಥ ಬಳಕೆ ಮೂಲಕ ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸುಲಭವಾಗಿ ಸಿಗುವಂತೆ ಮಾಡುವುದು ಇಂದಿನ ತುರ್ತು’ ಎಂದೂ ಹೇಳಿದರು.

‘ಕೋವಿಡ್‌ ಪಿಡುಗಿನ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿನ ತನ್ನ ಸಾಮರ್ಥ್ಯವನ್ನು ಭಾರತ ಜಗತ್ತಿಗೆ ತೋರಿದೆ. ದೇಶದ ಬಗೆಗಿನ ಗೌರವ ಹೆಚ್ಚಾಗಿದೆ. ಬರುವ ದಿನಗಳಲ್ಲಿ ಭಾರತ ಮೂಲದ ವೈದ್ಯರು, ಪ್ಯಾರಾ ಮೆಡಿಕಲ್‌ ಸಿಬ್ಬಂದಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು