ಬುಧವಾರ, ಜುಲೈ 6, 2022
22 °C

ಭೋಪಾಲ್ | ಮಹಿಳೆಯರಿಗೆ ಲೈಂಗಿಕ ಕಿರುಕುಳ; ಮೂವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್: ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ವಲ್ಲಪುರದಲ್ಲಿ ಮಹಿಳೆಯರಿಗೆ ಯುವಕರ ಗುಂಪೊಂಡು ಲೈಂಗಿಕ ಕಿರುಕುಳ ನೀಡಿದ್ದು ಹಾಗೂ ಈ ದುಷ್ಕೃತ್ಯಗಳನ್ನು ಕೆಲವರು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಸಂಬಂಧ ಬುಡಕಟ್ಟು ಜನಾಂಗಕ್ಕೆ ಸೇರಿದ ಮೂವರನ್ನು ಬಂಧಿಸಿರುವ ಪೊಲೀಸರು, ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬುಡಕಟ್ಟು ಜನರು ಆಚರಿಸುವ ‘ಭಗೋರಿಯಾ’ ಉತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜನರ ಗುಂಪಿನಲ್ಲಿದ್ದ ಕೆಲವರು ಮಹಿಳೆಯರೊಂದಿಗೆ  ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್‌ ಸಿಂಗ್‌ ತಿಳಿಸಿದ್ದಾರೆ.

‘ಮಹಿಳೆಯರನ್ನು ನೂಕುವುದು, ಅಪ್ಪಿಕೊಳ್ಳಲು ಯತ್ನಿಸುತ್ತಿದ್ದ ಯುವಕರು, ಕೆಲ ಮಹಿಳೆಯರಿಗೆ ಮುತ್ತಿಕ್ಕಲು ಮುಂದಾಗಿದ್ದ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ’ ಎಂದೂ ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು