ಶುಕ್ರವಾರ, ಮೇ 7, 2021
26 °C

ಜಿಎಸ್‌ಟಿ: ದಾಖಲೆಯ ₹ 1.41 ಲಕ್ಷ ಕೋಟಿ ಸಂಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯ ಮೂಲಕ ಏಪ್ರಿಲ್‌ನಲ್ಲಿ ₹ 1.41 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿದೆ. ಇದುವರೆಗೆ ಸಂಗ್ರಹ ಆಗಿರುವ ಗರಿಷ್ಠ ಮೊತ್ತ ಇದಾಗಿದೆ.

ಮಾರ್ಚ್‌ನಲ್ಲಿ ಜಿಎಸ್‌ಟಿ ಮೂಲಕ ₹ 1.23 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿತ್ತು. ಇದಕ್ಕೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಸಂಗ್ರಹ ಆಗಿರುವ ವರಮಾನದಲ್ಲಿ ಶೇ 14ರಷ್ಟು ಏರಿಕೆ ಕಂಡುಬಂದಿದೆ.

ಕೋವಿಡ್‌–19 ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಹಲವು ಭಾಗಗಳ ಮೇಲೆ ಪರಿಣಾಮ ಬೀರುತ್ತಿದ್ದರೂ, ದೇಶದ ಉದ್ಯಮಗಳು ರಿಟರ್ನ್ ಸಲ್ಲಿಸುವುದಷ್ಟೇ ಅಲ್ಲದೆ, ತಮ್ಮ ಜಿಎಸ್‌ಟಿ ಬಾಕಿಗಳನ್ನು ಸಕಾಲದಲ್ಲಿ ಪಾವತಿ ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು