ಭಾನುವಾರ, ಸೆಪ್ಟೆಂಬರ್ 19, 2021
29 °C

ಸಿಎಂ ಆಯ್ಕೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ– ನಿತಿನ್ ಪಟೇಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ‘ಗುಜರಾತ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿರುವ ಪಕ್ಷದ ನಿರ್ಧಾರದ ಬಗ್ಗೆ ನನಗೆ ಅಸಮಾಧಾನವಿಲ್ಲ‘ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ತಿಳಿಸಿದರು.

ನಿಯೋಜಿತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಲ್ಲಿ ಸೋಮವಾರ ನಿತಿನ್‌ ಪಟೇಲ್‌ ಅವರನ್ನು ಭೇಟಿ ಮಾಡಿದ್ದರು. ನಂತರ ‘ಪಕ್ಷದ ನಿರ್ಧಾರ ನಿಮಗೆ ಬೇಸರ ತಂದಿದೆಯೇ‘ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

‘ನನಗೆ ಯಾವ ಜವಾಬ್ದಾರಿಯನ್ನು ಕೊಟ್ಟರೂ ನಿರ್ವಹಿಸುವೆ. ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರದಲ್ಲಿ ನೀವು (ಮಾಧ್ಯಮದವರು) ಊಹಾ ಪೋಹಗಳನ್ನು ಹಬ್ಬಿಸುತ್ತಿದ್ದೀರಿ. ಏಕೆಂದರೆ ಅದು ನಿಮ್ಮ ವೃತ್ತಿ‘ ಎಂದರು.

‘ಸ್ಥಾನ–ಮಾನಗಳು ಸಿಗುವುದು ನನಗೆ ದೊಡ್ಡ ವಿಷಯವಲ್ಲ. ಜನರ ಪ್ರೀತಿ ಮತ್ತು ಗೌರವ ಬಹಳ ಮುಖ್ಯ. ನಾವೆಲ್ಲರೂ ಸಹೋದರ ಸಹೋದರಿಯರು. ಮುಂದಿನ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಾಗಿದೆಯೋ ಅವರು ನಮ್ಮವರೇ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ‘ ಎಂದು ನಿತಿನ್ ಪಟೇಲ್ ಹೇಳಿದರು.

‘ಜನಸಂಘ‘ದ ಕಾಲದಿಂದಲೂ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ನಿತಿನ್ ಪಟೇಲ್ ಅವರು ತಮ್ಮ 18ನೇ ವಯಸ್ಸಿಗೆ ರಾಜಕೀಯಕ್ಕೆ ಸೇರಿದ್ದರು. ಮುಖ್ಯಮಂತ್ರಿ ಅಭ್ಯರ್ಥಿಯ ಸ್ಪರ್ಧೆಯಲ್ಲಿ ಇವರ ಹೆಸರು ಕೇಳಿಬಂದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು