ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಮದುವೆ ಊಟ ಸೇವಿಸಿ 1200 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Last Updated 5 ಮಾರ್ಚ್ 2022, 12:55 IST
ಅಕ್ಷರ ಗಾತ್ರ

ಮೆಹ್ಸಾನಾ (ಪಿಟಿಐ): ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರ ಪುತ್ರನ ವಿವಾಹದಲ್ಲಿ ಊಟ ಮಾಡಿದ ಸುಮಾರು 1,200 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ವಿಸ್ನಾಗರ ತಾಲ್ಲೂಕಿನ ಸಾವಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ ಎಂದು ವಿಸ್ನಾಗರ ಗ್ರಾಮೀಣ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ಹೇಳಿದರು.

ಅಸ್ವಸ್ಥಗೊಂಡವರನ್ನು ವಿಸ್ನಾಗರ, ಮೆಹ್ಸಾನಾ ಮತ್ತು ವಡ್ನಾಗರದಲ್ಲಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರು ವಾಂತಿ ಮಾಡಿಕೊಳ್ಳುತ್ತಿದ್ದರು, ಇನ್ನೂ ಕೆಲವರಿಗೆ ಭೇದಿ ಉಂಟಾಗಿದೆ ಎಂದು ಅಧಿಕಾರಿ ಹೇಳಿದರು.

ಮದುವೆಯಲ್ಲಿನ ಆಹಾರದ ಮಾದರಿ ಸಂಗ್ರಹಿಸಿದ್ದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT