ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gujarat Polls: ₹290 ಕೋಟಿ ಮೌಲ್ಯದ ನಗದು, ಡ್ರಗ್ಸ್ ವಶ; 10 ಪಟ್ಟು ಹೆಚ್ಚು

Last Updated 30 ನವೆಂಬರ್ 2022, 13:58 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭೆ ಚುನಾವಣೆ ನಡೆಯುತ್ತಿರುವ ಗುಜರಾತ್‌ನಲ್ಲಿ ಈವರೆಗೆ ₹290 ಕೋಟಿಗೂ ಹೆಚ್ಚು ಮೌಲ್ಯದ ನಗದು, ಡ್ರಗ್ಸ್, ಮದ್ಯ ವಶಪಡಿಸಿಕೊಳ್ಳಲಾಗಿದೆ. ಇದು ರಾಜ್ಯದಲ್ಲಿ ಕಳೆದ ಬಾರಿ ನಡೆದಿದ್ದ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ 10 ಪಟ್ಟು ಹೆಚ್ಚಾಗಿದೆ.

2017ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾರೆ ₹27.21 ಕೋಟಿ ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಚುನಾವಣಾ ಆಯೋಗದ ಪ್ರಕಾರ, ವಿವಿಧ ಜಾರಿ ಏಜೆನ್ಸಿಗಳ ಮೂಲಕ ನಿಕಟ ನಿಗಾ ವಹಿಸಿದ್ದರ ಪರಿಣಾಮ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ವಡೋದರಾದಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ₹478 ಕೋಟಿ ಮೌಲ್ಯದ 143 ಕೆ.ಜಿ ಮೆಫೆಡ್ರೋನ್ ಮಾದಕವಸ್ತು ವಶಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ.

ಗುಜರಾತ್‌ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಹಾಗೂ 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಬಳಿಕ ಡಿ.8ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT