ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆ ಬಾವಿಗೆ ಬಿದ್ದ 12 ವರ್ಷದ ಬಾಲಕಿ; ಸೇನೆಯಿಂದ ರಕ್ಷಣಾ ಕಾರ್ಯಾಚರಣೆ

Last Updated 29 ಜುಲೈ 2022, 10:04 IST
ಅಕ್ಷರ ಗಾತ್ರ

ಅಹಮದಾಬಾದ್‌:ಗುಜರಾತ್‌ನ ಸುರೇಂದ್ರನಗರ್‌ ಜಿಲ್ಲೆಯ ಗಜಾನ್ವವ್‌ ಗ್ರಾಮದಲ್ಲಿ12 ವರ್ಷದ ಬಾಲಕಿಯೊಬ್ಬಳು ಕೊಳವೆ ಬಾವಿಗೆ ಬಿದ್ದಿರುವ ಪ್ರಕರಣ ಇಂದು (ಶುಕ್ರವಾರ) ಬೆಳಗ್ಗೆ 8.30ರ ಸುಮಾರಿಗೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯುಸುಮಾರು 60 ಅಡಿ ಆಳದಲ್ಲಿ ಸಿಲುಕಿದ್ದು, ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಕೊಳವೆ ಬಾವಿಯು ಸುಮಾರು200 ಅಡಿಗಿಂತಲೂ ಹೆಚ್ಚು ಆಳ ಇರಬಹುದು ಎಂದು ಮೂಲಗಳು ತಿಳಿಸಿವೆ.

'ಸೇನೆಯ ಒಂದು ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಬಾಲಕಿಯ ಪೋಷಕರು ವಲಸೆ ಕಾರ್ಮಿಕರು' ಎಂದು ಧ್ರಂಗಾಧ್ರ ತಾಲ್ಲೂಕಿನ ಅಧಿಕಾರಿ ಶೋಭನಾ ಫಲ್ಡು ಹೇಳಿದ್ದಾರೆ.

ಸೇನೆಯ ತಂಡ ಮಾತ್ರವಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ. ಸೇನೆ, ಆರೋಗ್ಯ ಮತ್ತು ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆ ಯಶಸ್ವಿಯಾಗುವ ಭರವಸೆ ಇದೆ ಎಂದು ಮತ್ತೊಬ್ಬ ಅಧಿಕಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT