ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಮದಾಬಾದ್: ₹154 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಅಮಿತ್ ಶಾ ಚಾಲನೆ

Last Updated 10 ಮಾರ್ಚ್ 2023, 10:56 IST
ಅಕ್ಷರ ಗಾತ್ರ

ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ತವರು ನಾಡು ಗುಜರಾತ್‌ನ ಅಮಹದಾಬಾದ್ ನಗರದಲ್ಲಿ ₹154 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನಗಳಿಗೆ ವರ್ಚುವಲ್ ಕಾರ್ಯಕ್ರಮದ ಮೂಲಕ ಶುಕ್ರವಾರ ಚಾಲನೆ ನೀಡಿದ್ದಾರೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೋರೇಷನ್ (ಎಎಂಸಿ) ಮತ್ತು ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರ (ಎಯುಡಿಎ) ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು.

ಜನಪ್ರತಿನಿಧಿಗಳು ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ ಎಂದು ಪ್ರತಿಪಾದಿಸಿರುವ ಅಮಿತ್ ಶಾ, ನನ್ನ ಲೋಕಸಭಾ ಕ್ಷೇತ್ರವಾದ ಗಾಂಧಿನಗರದಿಂದ ನಾನು ಸಂಸದನಾಗುವ ಮೊದಲೇ ಅಭಿವೃದ್ಧಿ ಕಾರ್ಯ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಎಲ್ಲ ಕ್ಷೇತ್ರಗಳಲ್ಲಿ ನಮ್ಮಿಂದಾಗುವಷ್ಟು ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಉಲ್ಲೇಖಿಸಿದರು.

ಸಂತಾಲ್‌ನಲ್ಲಿ ಫ್ಲೈಓವರ್, ಒಂದು ಸ್ಮಾರ್ಟ್ ಶಾಲೆ, ಹಿರಿಯ ನಾಗರಿಕರಿಗಾಗಿ ಎರಡು ಉದ್ಯಾನವನ ಸೇರಿದಂತೆ ವಿವಿಧ ಯೋಜನೆಗಳನ್ನು ಅಮಿತ್ ಶಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT