ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಚುನಾವಣೆ | ಅಲ್ಪೆಶ್‌ ಠಾಕೂರ್ ನಾಮಪತ್ರ ಸಲ್ಲಿಕೆ

Last Updated 17 ನವೆಂಬರ್ 2022, 20:10 IST
ಅಕ್ಷರ ಗಾತ್ರ

ಅಹಮದಾಬಾದ್‌: ಇತರ ಹಿಂದುಳಿದ ವರ್ಗಗಳ (ಒಬಿಸಿ) ಮುಖಂಡ ಅಲ್ಪೆಶ್‌ ಠಾಕೂರ್‌ ಅವರು ಗುಜರಾತ್‌ನ ಗಾಂಧಿನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿತ್ತು.

ನಾಮಪತ್ರ ಸಲ್ಲಿಸುವಾಗ ಅಲ್ಪೆಶ್‌ ಜೊತೆಗೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಇದ್ದರು.

2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಉತ್ತರ ಗುಜರಾತ್‌ನ ರಾಧನ್‌ಪುರದಿಂದ ಸ್ಪರ್ಧಿಸಿದ್ದ ಅಲ್ಪೆಶ್‌ ಸೋತಿದ್ದರು. 2017ರಲ್ಲಿ ರಾಧನ್‌ಪುರದಿಂದ ಕಾಂಗ್ರೆಸ್‌ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅಲ್ಪೆಶ್‌ ಗೆದ್ದಿದ್ದರು. 2019ರಲ್ಲಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT