ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ 

Last Updated 11 ನವೆಂಬರ್ 2022, 2:42 IST
ಅಕ್ಷರ ಗಾತ್ರ

ನವದೆಹಲಿ: ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದೆ.

ಇದರೊಂದಿಗೆ, ಗುಜರಾತ್‌ ಚುನಾವಣೆಗೆ ಕಾಂಗ್ರೆಸ್‌ ಈ ವರೆಗೆ 89 ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ. ಕಾಂಗ್ರೆಸ್ ಕಳೆದ ಶುಕ್ರವಾರ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಭುಜ್‌ನಿಂದ ಅರ್ಜುನ್‌ಭಾಯ್ ಭುಡಿಯಾ, ಜುನಾಗಢದಿಂದ ಭಿಖಾಭಾಯಿ ಜೋಶಿ, ಪೂರ್ವ ಸೂರತ್‌ನಿಂದ ಅಸ್ಲಾಂ ಸೈಕಲ್‌ವಾಲಾ, ಉತ್ತರ ಸೂರತ್‌ನಿಂದ ಅಶೋಕ್‌ಭಾಯ್ ಪಟೇಲ್ ಮತ್ತು ವಲ್ಸಾದ್‌ನಿಂದ ಕಮಲಕುಮಾರ್ ಪಟೇಲ್ ಅವರನ್ನು ಕಣಕ್ಕಿಳಿಸಲಾಗಿದೆ.

ಪ್ರಧಾನಿ ಮೋದಿ ಅವರ ತವರು ರಾಜ್ಯದಲ್ಲಿ ಬಿಜೆಪಿ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಅಧಿಕಾರದಲ್ಲಿದೆ. ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಡಿಸೆಂಬರ್ 8 ರಂದು ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT